ಪಿಎಸ್​ಐ ಪರೀಕ್ಷೆ ಮುಂದೂಡಿಕೆ ಇಲ್ಲ, ಸೆ.22ಕ್ಕೆ ಫಿಕ್ಸ್: ಕೆಇಎ ಸ್ಪಷ್ಟನೆ

ಬೆಂಗಳೂರು: ಇದೇ ಸೆಪ್ಟೆಂಬರ್ 22 ರಂದು ನಡೆಸಲು ಉದ್ದೇಶಿಸಲಾಗಿರುವ ಪಿಎಸ್​ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ದಿನಾಂಕ ಮುಂದೂಡಿಕೆ ಇಲ್ಲ ಎಂದು ಕರ್ನಾಟಕ ಪರೀಕ್ಷೆ ಪ್ರಾಧಿಕಾರ (KEA) ಸ್ಪಷ್ಟಪಡಿಸಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ 6 ಜಿಲ್ಲೆಗಳ ಒಟ್ಟು 164 ಕೇಂದ್ರಗಳಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯನ್ನು ಸೆ.22 ರಂದು ನಡೆಸಲು ತಯಾರಿ ನಡೆದಿದ್ದು ಹೆಚ್ಚಿನ ನಿಗಾ ವಹಿಸಲು ಪೊಲೀಸ್ ಇಲಾಖೆಯ ನೆರವು ಕೋರಲಾಗಿದೆ ಎಂದು ಕರ್ನಾಟಕ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ದಾವಣಗೆರೆ, ಧಾರವಾಡ, ಕಲಬುರಗಿ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ದೈಹಿಕ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ 66,990 ಮಂದಿ ಲಿಖಿತ ಪರೀಕ್ಷೆ ಬರೆಯಲಿದ್ದು, ಈಗಿನಿಂದಲೇ ಸಕಲ ಸಿದ್ಧತೆ ನಡೆಸಲಾಗಿದೆ ಎಂದು ಪ್ರಸನ್ನ ಅವರು ಮಾಹಿತಿ ನೀಡಿದ್ದಾರೆ.

ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಪರೀಕ್ಷೆ ಮುಂದೂಡುವಂತೆ ಒತ್ತಡ ಹೇರುವ ಪ್ರಯತ್ನ ನಡೆಸಿದ್ದು, ಅದಕ್ಕೆ ಯಾರೂ ಕಿವಿಗೊಡಬಾರದು ಮನವಿ ಮಾಡಿದ್ದಾರೆ. ಈಗಾಗಲೇ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಒಮ್ಮೆ ಈ ಪರೀಕ್ಷೆ ಮುಂದೂಡಲಾಗಿದೆ. ಪುನಃ ಹಾಗೆಯೇ ಮಾಡಿದರೆ ಪರೀಕ್ಷೆ ನಡೆಸುವುದು ಯಾವಾಗ? ಇಷ್ಟಕ್ಕು ಯಾವುದಾದರು ಒಂದು ಪರೀಕ್ಷೆ ಇದ್ದೇ ಇರುತ್ತದೆ. ಹಾಗಂತ ಪರೀಕ್ಷೆ ಇಲ್ಲದ ದಿನ ಹುಡುಕುವುದು ಕೂಡ ಕಷ್ಟ. ನಾವು ಈ ದಿನಾಂಕವನ್ನು ಮೂರು ತಿಂಗಳ ಮೊದಲೇ ತೀರ್ಮಾನಿಸಿದ್ದು, ಆ ಪ್ರಕಾರ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

See also  US Election: ಬಾಹ್ಯಾಕಾಶದಿಂದಲೇ ಮತ ಚಲಾಯಿಸಲಿದ್ದಾರಂತೆ ಸುನೀತಾ ವಿಲಿಯಮ್ಸ್
4 1 vote
Article Rating
Subscribe
Notify of
guest
0 Comments
Inline Feedbacks
View all comments