ತುಮಕೂರು : ಗಣೇಶ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಯ ವಿಸರ್ಜನೆ ವೇಳೆ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೂಡ ದುರಂತಗಳು ಸಂಭವಿಸುತ್ತವೆ. ಇದೀಗ ಇಂತಹದ್ದೇ ಘಟನೆ ತುಮಕೂರಿನಲ್ಲಿ ನಡೆದಿದ್ದು, ಭಾನುವಾರದಂದು ಗಣೇಶ ಮೂರ್ತಿ ವಿಸರ್ಜನೆಯ ವೇಳೆ ತಂದೆ ಮಗ ಸೇರಿದಂತೆ ಒಟ್ಟು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು ಗಣೇಶ ವಿಸರ್ಜನೆ ವೇಳೆ ತಂದೆ ಮಗ ಸೇರಿ ಮೂವರ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನ ಹಟ್ಟಿ ಕೆರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ತಂದೆ ರೇವಣ್ಣ (46) ಪುತ್ರ ಶರತ್ (26) ಹಾಗೂ ದಯಾನಂದ (29) ಮೃತ ದುರ್ದೈವಿಗಳು ಎಂದು ತಿಳಿದುಬಂದಿದ್ದು, ಸದ್ಯ ಶವಗಳಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ದಂಡಿನಯಿವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.