HSRP ನಂಬರ್‌ ಪ್ಲೇಟ್‌: 3 ದಿನ ದಂಡ ವಿಧಿಸದಿರಲು ಸಾರಿಗೆ ಇಲಾಖೆ ನಿರ್ಧಾರ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಅಂತಿಮ ಗಡುವು ಭಾನುವಾರಕ್ಕೆ ಮುಕ್ತಾಯವಾಗಿದ್ದು, ಈ ನಡುವೆ ಸೆ.18ರವರೆಗೂ ಕಠಿಣ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಸಾರಿಗೆ ಇಲಾಖೆ ಸೂಚನೆ ಹಿನ್ನೆಲೆಯಲ್ಲಿ ಇಂದು ಕೂಡ ನೋಂದಣಿಗೆ ಅವಕಾಶ ಇದ್ದು, ನೋಂದಣಿ ಮಾಡಿಸಿಕೊಳ್ಳದವರಿಗೆ ನೋಂದಣಿ ಮಾಡಿಸಿಕೊಳ್ಳುವ ಅವಕಾಶ ಸಿಕ್ಕಂತಾಗಿದೆ. ಸೆಪ್ಟೆಂಬರ್ 18ರಂದು ಎಚ್‌ಎಸ್‌ಆರ್‌ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಹೈಕೋರ್ಟ್ ನಲ್ಲಿ ಬರಲಿದೆ. ಹೀಗಾಗಿ, ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಸಾರಿಗೆ ಇಲಾಖೆ ಆಯುಕ್ತ ಎ.ಎಂ.ಯೋಗೀಶ್‌ ಹೇಳಿದ್ದಾರೆ.

See also  ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾ ವೆಚ್ಚ ತಿಂಗಳಿಗೆ 54 ಲಕ್ಷ ರೂ.: RTI ಅರ್ಜಿಯಿಂದ ಬಹಿರಂಗ
5 1 vote
Article Rating
Subscribe
Notify of
guest
0 Comments
Inline Feedbacks
View all comments