ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ ಉತ್ಸವ’ದ ಧ್ವಜಾರೋಹಣ ನೆರವೇರಿಸಿದ CM ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಇಂದು ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ ಉತ್ಸವ’ದ ಧ್ವಜಾರೋಹಣ ನೆರವೇರಿಸಿದರು.

76 ನೇ ಕರ್ನಾಟಕ ಕಲ್ಯಾಣ ಉತ್ಸವ ದಿನಾಚರಣೆ 2024 ರ ಪ್ರಯುಕ್ತ ಸಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ್, ಹೆಚ್.ಕೆ ಪಾಟೀಲ್, ಡಿ ಸುಧಾಕರ್ ಮತ್ತಿತರರಿದ್ದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ.

ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು, ಇದಕ್ಕಾಗಿ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು. 2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ನಮ್ಮ ಸರ್ಕಾರವೇ ಪ್ರಯತ್ನಿಸಿದ್ದು ಹೊರತು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿತ್ತು. ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.


See also  ಮುಡಾ ಹಗರಣವನ್ನು 'CBI ತನಿಖೆ'ಗೆ ವರ್ಗಾಯಿಸುವಂತೆ ಕೋರಿ 'ಹೈಕೋರ್ಟ್'ಗೆ ಅರ್ಜಿ ಸಲ್ಲಿಕೆ | 
0 0 votes
Article Rating
Subscribe
Notify of
guest
0 Comments
Inline Feedbacks
View all comments