ಖಾಸಗಿ ರೆಸಾರ್ಟ್‌ ನಲ್ಲಿ ಅತ್ಯಾಚಾರ; ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ದೂರು

ಬೆಂಗಳೂರು, ಸೆಪ್ಟೆಂಬರ್‌ 19: ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಹಲವು ಪ್ರಕರಣಗಳು ತಡವಾಗಿ ಬೆಳಕಿಗೆ ಬರುತ್ತಿದ್ದು, ಇದೀಗ ಅತ್ಯಾಚಾರ ಕುರಿತು ದೂರು ದಾಖಲಿಸಿದ್ದಾರೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್‌ನಲ್ಲಿ ಮುನಿರತ್ನ ಅವರ ವಿರುದ್ಧ ಒಕ್ಕಲಿಗ, ದಲಿತ ಸಂಘಟನೆಗಳು ಸರಣಿ ಪ್ರತಿಭಟನೆ ಮಾಡ್ತಿವೆ. ಕಾಂಗ್ರೆಸ್‌ಗೆ ಈ ಪ್ರಕರಣವೇ ದೊಡ್ಡ ಅಸ್ತ್ರವಾಗಿ ಸಿಕ್ಕಿದ್ದು, ಇದೀಗ ಮುನಿರತ್ನಗೆ ಮತ್ತೊಂದು ಕಂಟಕ ಎದುರಾಗಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ. ಮುನಿರತ್ನ ವಿರುದ್ಧ ರಾಮನಗರದ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ನನ್ನ ಮೇಲೆ ಅತ್ಯಾಚಾರ ಆಗಿದೆ. ಕಗ್ಗಲೀಪುರದ ರೆಸಾರ್ಟ್‌ನಲ್ಲಿ ಈ ಕೃತ್ಯ ನಡೆದಿದೆ ಎಂದು ಮಹಿಳೆಯೊಬ್ಬರು ಆರೋಪಿಸಿ ಮುನಿರತ್ನ ವಿರುದ್ಧ ದೂರು ನೀಡಿದ್ದಾರೆ. ಮುನಿರತ್ನ ಸೇರಿ ಒಟ್ಟು 7 ಜನರ ವಿರುದ್ಧ ಕೇಸ್‌ ದಾಖಲಿಸಿದ್ದಾರೆ. ಅಂತೆಯೇ ಪೊಲೀಸರು ಬಿಎನ್​ಎಸ್ 354ಎ, 354 ಸಿ, 376, 506, 504, 120(B), 149, 384, 406, 308 ಅಡಿ‌ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಆರ್​.ಆರ್​.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್​ ಕುಮಾರ್​, ಕಿರಣ್​​, ಲೋಹಿತ್​​, ಮಂಜುನಾಥ್​, ಲೋಕಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಖಾಸಗಿ ರೆಸಾರ್ಟ್​ನಲ್ಲಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು DySP ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದಾರೆ. ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹಾಜರಾಗಿ ಸಂತ್ರಸ್ತೆ 2 ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಇಂದು ಸಂತ್ರಸ್ತೆ ಜೊತೆ ಪೊಲೀಸರು ಸ್ಥಳಮಹಜರು ನಡೆಸಲಿದ್ದಾರೆ.

See also  ಶಾಸಕ ಮುನಿರತ್ನ ಪೊಲೀಸ್ ಕಸ್ಟಡಿ ಅಂತ್ಯ . ಮುಂದೇನು?
0 0 votes
Article Rating
Subscribe
Notify of
guest
0 Comments
Inline Feedbacks
View all comments