ಬೆಂಗಳೂರು : ಸರಕಾರದ ಆದೇಶದನ್ವಯ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ (HSRP Number Plate) ಅಳವಡಿಕೆಯ ಕಾರ್ಯ ನಡೆಯುತ್ತಿದೆ. ರಾಜ್ಯ ಸರಕಾರ ಈಗಾಗಲೇ ಹಲವು ಬಾರಿ ಡೆಡ್‌ಲೈನ್ ನೀಡಿದ್ದರೂ ಇದುವರೆಗೂ ಬಹುತೇಕರು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಲ್ಲ.ವಾಹನಗಳ ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸಾರಿಗೆ ಇಲಾಖೆ ರಾಜ್ಯದಲ್ಲಿನ ಎಲ್ಲಾ ದ್ವಿಚಕ್ರ, ಮೂರು ಚಕ್ರ, ನಾಲ್ಕು ಚಕ್ರ ಸೇರಿದಂತೆ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(High Security Registration Plate (HSRP) ಅಳವಡಿಕೆ ಮಾಡುವಂತೆ ಕಡ್ಡಾಯ ಆದೇಶ ಹೊರಡಿಸಿತ್ತು. ರಾಜ್ಯ ಸರಕಾರದ ಆದೇಶ ಹೊರಬಿದ್ದು, ಆರು ತಿಂಗಳೇ ಕಳೆದಿದ್ದರೂ ಕೂಡ ಬಹುತೇಕ ವಾಹನ ಸವಾರರು ಇಂದಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಇದೀಗ ಅವಧಿಯನ್ನು ನವೆಂಬರ್ 20ರ ವರೆಗೆ ವಿಸ್ತರಣೆ ಮಾಡಿದೆ.
ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅವಧಿ ವಿಸ್ತರಣೆ
Subscribe
Login
0 Comments