ಅಮರಾವತಿ: ಕೋಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ತಿರುಪತಿಯ ತಿರುಮಲ ದೇಗುಲದ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಹಾಗೂ ಪ್ರಾಣಿಗಳ ಕೊಬ್ಬು ಬಳಕೆ ಆಗುತ್ತಿತ್ತೆಂಬ ವಿಚಾರ ಬೆಳಕಿಗೆ ಬಂದಿದ್ದು, ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ಅವಧಿಯಲ್ಲಿ ನಡೆದಿತ್ತೆನ್ನಲಾದ ಈ ಪ್ರಮಾದವನ್ನು ಸತ್ಯ ಎಂದು ಗುಜರಾತ್ನ ಪ್ರಯೋಗಾಲಯ ದೃಢಪಡಿಸಿದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎಲ್ಲೆಡೆ ಚರ್ಚೆ ಜೋರಾಗಿ ನಡೆಯುತ್ತಿದೆ. ತಿರುಮಲ ಲಡ್ಡು ವಿವಾದದ ಬಗ್ಗೆ ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಆಂಧ್ರದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿಕೆಯನ್ನು ಉಲ್ಲೇಖಿಸಿ ನಟ ಪ್ರಕಾಶ್ ರಾಜ್ ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ನೀವು ಉಪಮುಖ್ಯಮಂತ್ರಿ ಆಗಿರುವ ರಾಜ್ಯದಲ್ಲೇ ಈ ವಿವಾದ ನಡೆದಿದೆ. ದಯವಿಟ್ಟು ಈ ಬಗ್ಗೆ ತನಿಖೆ ನಡೆಸಿ, ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಿ.
ಅದನ್ನು ಬಿಟ್ಟು ನೀವೇಕೆ ಆತಂಕಗಳನ್ನು ಹರಡುತ್ತಿದ್ದೀರಿ ಮತ್ತು ಸಮಸ್ಯೆಯನ್ನು ರಾಷ್ಟ್ರಮಟ್ಟದಲ್ಲಿ ಬಿಂಬಿಸುತ್ತಿದ್ದೀರಿ. ದೇಶದಲ್ಲಿ ಈಗಾಗಲೇ ಸಾಕಷ್ಟು ಕೋಮುಗಲಭೆಗಳಿವೆ ಎಂದಿರುವ ಪ್ರಕಾಶ್ ರಾಜ್, ಕೇಂದ್ರದಲ್ಲಿರುವ ನಿಮ್ಮ ಸ್ನೇಹಿತರಿಗೆ ಧನ್ಯವಾದಗಳು ಎನ್ನುವ ಮೂಲಕ ಪ್ರಧಾನಿ ಮೋದಿ ಸರ್ಕಾರದ ಕಾಲೆಳೆದಿದ್ದಾರೆ.
ತಿರುಪತಿ ಲಡ್ಡು ವಿವಾದ: ಪವನ್ ಕಲ್ಯಾಣ್ಗೆ ಪ್ರಕಾಶ್ ರಾಜ್ ಟಾಂಗ್
Subscribe
Login
0 Comments