ಮುಡಾ ಹಗರಣವನ್ನು ‘CBI ತನಿಖೆ’ಗೆ ವರ್ಗಾಯಿಸುವಂತೆ ಕೋರಿ ‘ಹೈಕೋರ್ಟ್’ಗೆ ಅರ್ಜಿ ಸಲ್ಲಿಕೆ | 

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಕೋರ್ಟ್ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಮೈಸೂರಿನ ಲೋಕಾಯುಕ್ತದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಇನ್ನೂ ಮುಡಾ ಪ್ರಕರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್ ಗೆ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿದ್ದಾರೆ. ಈ ಅರ್ಜಿಯನ್ನು ಹೈಕೋರ್ಟ್ ನ್ಯಾಯಪೀಠವು ಸೋಮವಾರ ವಿಚಾರಣೆಗೆ ನಡೆಸಲು ನಿಗದಿ ಪಡಿಸಿದೆ. ಅಂದಹಾಗೆ ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸಿದ್ಧರಾಮಯ್ಯ ಎ-1 ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ ಎ-2 ಆರೋಪಿಯಾಗಿದ್ದಾರೆ. ಅವರ ಭಾಮೈದ ಮಲ್ಲಿಕಾರ್ಜುನ ಎ-3 ಆಗಿದ್ದಾರೆ. ಒಟ್ಟು ಐವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

See also  ಬೆಳಗಾವಿಗೆ ಬರಾಕ್‌ ಒಬಾಮಾ?
0 0 votes
Article Rating
Subscribe
Notify of
guest
0 Comments
Inline Feedbacks
View all comments