ಬೆಂಗಳೂರು:- ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಚುನಾವಣಾ ಬಾಂಡ್‌ಗಳ ಮೂಲಕ ಕೋಟ್ಯಾಂತರ ರೂಪಾಯಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ ಹೊರಡಿಸಿದೆ. ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕಾರಿ ಸಂಘರ್ಷ ಪರಿಷತ್‌ನ ಆದರ್ಶ ಆರ್. ಐಯ್ಯರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರು ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ದೂರಿನ ಪ್ರತಿ & ದಾಖಲೆ ಠಾಣೆಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನ ತಿಲಕ್‌ನಗರ ಠಾಣೆಗೆ ಕಳಿಸುವಂತೆ ಕೋರ್ಟ್ನ ಕಚೇರಿಗೆ 42ನೇ ಎಸಿಎಂಎಂ ಜಡ್ಜ್ ಸೂಚನೆ ನೀಡಿದ್ದಾರೆ. FIR ನಿರೀಕ್ಷೆಯಲ್ಲಿ ಎಂದು ವಿಚಾರಣೆ ಅ.10ಕ್ಕೆ ಮುಂದೂಡಲಾಗಿದೆ.
ತಿಲಕ್‌ನಗರ ಪೊಲೀಸರಿಗೆ ಎಫ್‌ಐಆರ್ ದಾಖಲಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ ದೂರು ಸಲ್ಲಿಸಲಾಗಿದೆ