ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಇಂದು ನಡೆಸಿದ್ದು ಅ.4ಕ್ಕೆ ಮುಂದೂಡಿ ಆದೇಶಿಸಿದೆ.
ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ನ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿರುವ 57ನೇ CCH ಕೋರ್ಟ್ ಈ ಆದೇಶವನ್ನು ನೀಡಿದೆ.
ಇನ್ನು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ದರ್ಶನ್ಗೆ ಮತ್ತೆ ಆಘಾತ ಆಗಿದೆ.
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಜೈ.ಶಂಕರ್ ಅವರು ಎಸ್ಪಿಪಿಗೆ ಆಕ್ಷೇಪಣೆ ಸಲ್ಲಿಸುವಂತೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ಇಂದಿಗೆ ಮುಂದೂಡಿದ್ದರು. ಹತ್ಯೆ ಕೇಸ್ನಲ್ಲಿ ದರ್ಶನ್ ಜೈಲು ಸೇರಿ 100 ದಿನಗಳ ನಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ವಾದ ಮಂಡಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಬೇಲ್ ಅರ್ಜಿ ವಿಚಾರಣೆ ಕೋರ್ಟ್ ಮುಂದೂಡಿದೆ.
ಈ ಮೊದಲ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ಗೆ ಅಲ್ಲಿ ರಾಜಾತಿಥ್ಯ ಅನುಭವಿಸಿದ್ದ ಪ್ರಕರಣ ಸದ್ದು ಮಾಡಿದ ಬೆನ್ನಲ್ಲೇ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.