ನ್ಯಾಷನಲ್ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಕಾಂಗ್ರೆಸ್, ಎಎಪಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆ ಪ್ರಕ್ರಿಯೆ ಈಗ ಸುಲಭವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ನ್ಯಾಷನಲ್ ಕಾನ್ಫರೆನ್ಸ್‌ಗೆ ಪಕ್ಷೇತರ ಶಾಸಕರು ಬೆಂಬಲ ಕೊಟ್ಟ ಬಳಿಕ ಸರಳ ಬಹುಮತ ಪಡೆದುಕೊಂಡಿತ್ತು. ಚುನಾವಣೆಗೂ ಮೊದಲ ಎನ್‌ಸಿ-ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದವು.

ಈಗ ಕಾಂಗ್ರೆಸ್ ಜೊತೆಗೆ ಆಮ್ ಆದ್ಮಿ ಪಕ್ಷ ಕೂಡ ನ್ಯಾಷನಲ್ ಕಾನ್ಫರೆನ್ಸ್‌ಗೆ ಬೆಂಬಲ ನೀಡಿವೆ.

ಒಮರ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸಲು ಎನ್‌ಸಿಗೆ ಕಾಂಗ್ರೆಸ್ ಮತ್ತು ಎಎಪಿ ಬೆಂಬಲ ಸೂಚಿಸಿವೆ. 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷದ ಸ್ಥಾನಮಾನವನ್ನು ರದ್ದು ಮಾಡಿದ ಬಳಿಕ ನಡೆದ ಮೊದಲ ವಿಧಾನಸಭಾ ಚುನಾವಣೆಯಲ್ಲಿ ಎನ್‌ಸಿ ನಾಯಕ ಒಮರ್ ಅಬ್ದುಲ್ಲಾ, ಜಂಟಿ ಮುಖ್ಯಮಂತ್ರಿಯಾಗಿ ಘೋಷಣೆ ಮಾಡಲಾಗಿತ್ತು.

ಶುಕ್ರವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಜಮ್ಮು ಮತ್ತು ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಾರಿಕ್ ಹಮೀದ್ ಕರ್‍ರಾ ಸೇರಿದಂತೆ ಎಲ್ಲಾ ಆರು ಶಾಸಕರು ಭಾಗವಹಿಸಿದ್ದರು. ಶಾಸಕರು ನಿರ್ಣಯವನ್ನು ಅಂಗೀಕರಿಸಿದ್ದು, ಎನ್‌ಸಿಗೆ ಬೆಂಬಲ ನೀಡುವ ಪತ್ರಗಳಿಗೆ ಸಹಿ ಹಾಕಿದರು.

See also  ದರ್ಶನ್: ಯಶಸ್ಸಿನ ಹಾದಿಯ ಏಳು - ಬೀಳುಗಳು
0 0 votes
Article Rating
Subscribe
Notify of
guest
0 Comments
Inline Feedbacks
View all comments