ಬಳ್ಳಾರಿ: ಸಿರುಗುಪ್ಪ ಮತ್ತು ಕಂಪ್ಲಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯ ಪುರಸಭೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
43 ಅಂಗನವಾಡಿ ಕಾರ್ಯಕರ್ತೆಯರು ಮತ್ತು 94 ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 04 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಿರುಗುಪ್ಪ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಅಥವಾ ದೂ.08396-220203 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.