ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗಲಿದ್ದು, ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ದಾವಣಗೆರೆ, ತುಮಕೂರು ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕಲಬುರಗಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿಯಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.
ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಉತ್ತರ ಕನ್ನಡ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ