ವಾಷಿಂಗ್ಟನ್: ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಬಾಹ್ಯಾಕಾಶದಿಂದಲೇ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರಂತೆ.
ಶುಕ್ರವಾರ ತಡರಾತ್ರಿ ಬಾಹ್ಯಾಕಾಶದಿಂದಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸುವ ವೇಳೆ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕುರಿತು ಕೇಳಿದ ಪ್ರಶ್ನೆಗೆ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಈ ಉತ್ತರ ನೀಡಿದ್ದಾರೆ ಎನ್ನಲಾಗಿದೆ, ಸುದ್ದಿಗೋಷ್ಠಿಯಲ್ಲಿ ಅಲ್ಲಿನ ಕಾರ್ಯಾಚರಣೆಯ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ ಜೊತೆಗೆ ಬಾಹ್ಯಾಕಾಶದಿಂದಲೇ ಮೊದಲ ಬಾರಿಗೆ ಮತದಾನ ಮಾಡಲು ತುಂಬಾ ಉತ್ಸುಕಳಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.