ಸೆಪ್ಟೆಂಬರ್ 16: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದೆ. ರಾಜದಾದ್ಯಂತ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು ಮಳೆಯ ಪ್ರಮಾಣ ತೀರಾ ಕಡಿಮೆಯಾಗಿದೆ. ಇಂದು ಕೂಡ ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಸೂಚನೆ ನೀಡಿದೆ. ಇಂದು (ಸೆ.16) ದಕ್ಷಿಣ ಕನ್ನ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳಲಿದೆ. ಕೊಡಗು, ಹಾಸನ, ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳಲ್ಲೂ ಮಳೆ ಪ್ರಮಾಣ ಕಡಿಮೆ ಇರಲಿದೆ. ಮಲೆನಾಡಿನಲ್ಲಿ ಕಳೆದ ಕೆಲ ದಿನಗಳಿಂದ ವರಣುನ ಅರ್ಭಟ ಕಡಿಮೆಯಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.
ಕರ್ನಾಟಕದಾದ್ಯಂತ ಇಂದು ಮಳೆಯ ಅರ್ಭಟ
Subscribe
Login
0 Comments