ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿ ಕೊಬ್ಬು ಬಳಕೆ ಆರೋಪ: ತುಪ್ಪದ ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ

ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ತನಿಖಾ ವರದಿಯಲ್ಲೂ ಇದು ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷೆ ಮಾಡಲು ಸಮಿತಿಯೊಂದನ್ನು ಟಿಟಿಡಿ ಸ್ಥಾಪಿಸಿದೆ.

ನಾಲ್ಕು ತಜ್ಞರನ್ನು ಈ ಸಮಿತಿ ಒಳಗೊಂಡಿದೆ. ಡಾ. ಸ್ವರ್ಣಲತಾ, ಡಾ. ವಿಜಯ್ ಭಾಸ್ಕರ್ ರೆಡ್ಡಿ, ಡಾ.ಮಹದೇವನ್ ಹಾಗೂ ಡಾ. ಸುರೇಂದ್ರನಾಥ್ ಅವರನ್ನೊಳಗೊಂಡಂತೆ ಸಮಿತಿಯನ್ನು ರಚಿಸಲಾಗಿದ್ದು ಇವರು ತುಪ್ಪದ ಗುಣಮಟ್ಟವನ್ನು ಪರಿಶೀಲನೆ ನಡೆಸಲಿದ್ದಾರೆ. ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆ ಇದೆ. ಈ ಸಮಿತಿ ಗುಣಮಟ್ಟದ ತುಪ್ಪ ಖರೀದಿಸಲು ಕೆಲಸ ಮಾಡಲಾಗಿದೆ. ಈ ಸಮಿತಿಯ ಶಿಫಾರಸ್ಸಿನ ಮೇಲೆ ಪ್ರಸ್ತುತ ಕರ್ನಾಟಕ ಸಹಕಾರಿ ಹಾಲು ಉತ್ಪನ್ನ ಕಂಪನಿಯಿಂದ ನೇರವಾಗಿ ತುಪ್ಪವನ್ನು ಖರೀದಿಸಲಾಗುತ್ತಿದೆ.

ಚಂದ್ರಬಾಬು ನಾಯ್ಡು ಆರೋಪವೇನು?

ತಿರುಮಲ ಶ್ರೀವಾರಿ ಲಡ್ಡು ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೆನ್ಸೇಷನಲ್ ಕಾಮೆಂಟ್ ಮಾಡಿದ್ದಾರೆ. ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಪತಿ ಪ್ರಸಾದ ತಯಾರಿಕೆಗೆ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಅವರು ಟೀಕಿಸಿದ್ದಾರೆ. ಈ ಆರೋಪ ಸದ್ಯ ಆಂಧ್ರ ಪ್ರದೇಶದಲ್ಲಿ ಸಂಚಲನವನ್ನು ಸೃಷ್ಟಿಮಾಡಿದೆ.

ಬುಧವಾರ ನಡೆದ ಎನ್‌ಡಿಎ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು ಅವರು ತಿರುಪತಿ ದೇವಸ್ಥಾನದಲ್ಲಿ ತಯಾರಾಗುತ್ತಿದ್ದ ಪ್ರಸಿದ್ಧ ಲಡ್ಡು ಪ್ರಸಾದದ ಬಗ್ಗೆ ಸಂವೇದನಾಶೀಲ ಹೇಳಿಕೆ ನೀಡಿದ್ದಾರೆ. ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಮಲ ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ. ಇದರಿಂದಾಗಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆಯಾಗಿದೆ. ದೇವರಿಗೆ ಅರ್ಪಿಸುವ ನೈವೇದ್ಯವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪ ಮಾಡಿದ್ದಾರೆ.

ಜಗನ್ ಮೋಹನ್ ಅವರ ಅಧಿಕಾರದ ಅವಧಿಯಲ್ಲಿ ಭಕ್ತರಿಗೆ ಕಳಪೆ ಲಡ್ಡೂಗಳು ಮತ್ತು ಕಳಪೆ ಗುಣಮಟ್ಟದ ಅನ್ನಪ್ರಸಾದವನ್ನು ವಿತರಿಸಲಾಗಿದೆ. ಆಂಧ್ರಪ್ರದೇಶದಲ್ಲಿ ಟಿಡಿಪಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಿರುಮಲ ಲಡ್ಡು ತಯಾರಿಕೆಯಲ್ಲಿ ಶುದ್ಧ ತುಪ್ಪವನ್ನು ಬಳಸಲಾಗುತ್ತಿದೆ ಎಂದು ಚಂದ್ರಬಾಬು ಅವರು ಹೇಳಿದ್ದಾರೆ. ಹಿಂದೂಗಳು ಅತ್ಯಂತ ಪವಿತ್ರವೆಂದು ಪರಿಗಣಿಸುವ ತಿರುಮಲ ಶ್ರೀವಾರಿ ಲಡ್ಡು ಕುರಿತು ಸಿಎಂ ಚಂದ್ರಬಾಬು ನಾಯ್ಡು ನೀಡಿರುವ ಈ ಹೇಳಿಕೆ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಯಾವ ರೀತಿಯ ಪ್ರತಿಕ್ರಿಯೆಗಳು ಬರುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

ಮತ್ತೊಂದೆಡೆ ಆಂಧ್ರಪ್ರದೇಶದಲ್ಲಿ ಟಿಡಿಪಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ತಿರುಮಲದಲ್ಲಿ ಶುದ್ಧೀಕರಣ ಪ್ರಾರಂಭವಾಯಿತು. ಬಳಿಕ ಇಒ ಆಗಿ ಶ್ಯಾಮರಾವ್ ಅವರನ್ನು ನೇಮಿಸಲಾಯಿತು. ಇಒ ಆಗಿ ಜವಾಬ್ದಾರಿ ವಹಿಸಿಕೊಂಡಾಗಿನಿಂದ ಶ್ಯಾಮರಾವ್ ಅವರು ಭಕ್ತರಿಗೆ ನೀಡುವ ಸೌಲಭ್ಯ ಮತ್ತು ಪ್ರಸಾದದ ಗುಣಮಟ್ಟಕ್ಕೆ ವಿಶೇಷ ಗಮನ ಹರಿಸಿದ್ದಾರೆ. ಶ್ರೀವಾರಿ ಲಡ್ಡು ಗುಣಮಟ್ಟ ಕುಸಿತಕ್ಕೆ ತುಪ್ಪ ಕಾರಣ ಎಂದು ಗುರುತಿಸಿ ತುಪ್ಪ ಪೂರೈಕೆ ಮಾಡುತ್ತಿರುವ ಕೆಲ ಕಂಪನಿಗಳಿಗೆ ಇಒ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಸದ್ಯ ಲಡ್ಡೂಗಳನ್ನು ಶುದ್ಧ ತುಪ್ಪ ಬಳಸಿ ತಯಾರಿಸಲಾಗುತ್ತಿದೆ.

See also  HSRP ನಂಬರ್‌ ಪ್ಲೇಟ್‌: 3 ದಿನ ದಂಡ ವಿಧಿಸದಿರಲು ಸಾರಿಗೆ ಇಲಾಖೆ ನಿರ್ಧಾರ

ಗುಣಮಟ್ಟದ ತುಪ್ಪ ಖರೀದಿಸಲು ನಾಲ್ವರು ಗಣ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ಸದ್ಯ ಟಿಟಿಡಿ ರಚಿಸಿದೆ. ಈ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಪ್ರಸ್ತುತ ಕರ್ನಾಟಕ ಸಹಕಾರಿ ಹಾಲು ಉತ್ಪನ್ನ ಕಂಪನಿಯಿಂದ ನೇರವಾಗಿ ತುಪ್ಪವನ್ನು ಖರೀದಿಸಲಾಗುತ್ತಿದೆ. ಇದೇ ತುಪ್ಪವನ್ನು ತಿರುಮಲ ಲಡ್ಡು ತಯಾರಿಕೆಯಲ್ಲಿ ಸದ್ಯ ಬಳಸಲಾಗುತ್ತಿದೆ

0 0 votes
Article Rating
Subscribe
Notify of
guest
0 Comments
Inline Feedbacks
View all comments