ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ನ್ಯಾಯಾಂಗದ ಬಂಧನದಲ್ಲಿದ್ದು ಷರತ್ತುಬದ್ಧ ಜಾಮೀನನ ಮೇಲೆ ಬಿಡುಗಡೆಯಾದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೊಲೀಸರು ಶುಕ್ರವಾರ ಬೆಳಿಗ್ಗೆಯೇ ಬಂಧಿಸಿದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮುನಿರತ್ನ ಅವರು ನ್ಯಾಯಾಂಗದ ಬಂಧನದಲ್ಲಿ ಇದ್ದರು.ಮುನಿರತ್ನ ಪರ ವಕೀಲರು ಜಾಮೀನು ಪ್ರತಿಯನ್ನು ಜೈಲಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು. ಎಲ್ಲ ಪ್ರಕ್ರಿಯೆ ಮುಗಿದ ಕೂಡಲೇ ಕಗ್ಗಲಿಪುರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡರು. ಮುನಿರತ್ನ ಅವರನ್ನು ವಶಕ್ಕೆ ಪಡೆಯಲು ರಾಮನಗರ ಪೊಲೀಸರು ಗುರುವಾರ ರಾತ್ರಿಯಿಂದಲೂ ಜೈಲು ಬಳಿ ಬೀಡುಬಿಟ್ಟಿದ್ದರು. ಅತ್ಯಾಚಾರ ಪ್ರಕರಣದಲ್ಲಿ ಅವರನ್ನು ಮತ್ತೆ ಬಂಧಿಸಲಾಗಿದೆ.
ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ
Subscribe
Login
0 Comments