ತಿರುಪತಿ ಲಡ್ಡು ವಿವಾದ: ಪವನ್​ ಕಲ್ಯಾಣ್​ಗೆ ಪ್ರಕಾಶ್ ರಾಜ್ ಟಾಂಗ್

ಅಮರಾವತಿ: ಕೋಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ತಿರುಪತಿಯ ತಿರುಮಲ ದೇಗುಲದ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಹಾಗೂ ಪ್ರಾಣಿಗಳ ಕೊಬ್ಬು ಬಳಕೆ ಆಗುತ್ತಿತ್ತೆಂಬ ವಿಚಾರ ಬೆಳಕಿಗೆ ಬಂದಿದ್ದು, ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ಅವಧಿಯಲ್ಲಿ ನಡೆದಿತ್ತೆನ್ನಲಾದ ಈ ಪ್ರಮಾದವನ್ನು ಸತ್ಯ ಎಂದು ಗುಜರಾತ್​ನ ಪ್ರಯೋಗಾಲಯ ದೃಢಪಡಿಸಿದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎಲ್ಲೆಡೆ ಚರ್ಚೆ ಜೋರಾಗಿ ನಡೆಯುತ್ತಿದೆ. ತಿರುಮಲ ಲಡ್ಡು ವಿವಾದದ ಬಗ್ಗೆ ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಆಂಧ್ರದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿಕೆಯನ್ನು ಉಲ್ಲೇಖಿಸಿ ನಟ ಪ್ರಕಾಶ್​ ರಾಜ್ ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ.​ ನೀವು ಉಪಮುಖ್ಯಮಂತ್ರಿ ಆಗಿರುವ ರಾಜ್ಯದಲ್ಲೇ ಈ ವಿವಾದ ನಡೆದಿದೆ. ದಯವಿಟ್ಟು ಈ ಬಗ್ಗೆ ತನಿಖೆ ನಡೆಸಿ, ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಿ.
ಅದನ್ನು ಬಿಟ್ಟು ನೀವೇಕೆ ಆತಂಕಗಳನ್ನು ಹರಡುತ್ತಿದ್ದೀರಿ ಮತ್ತು ಸಮಸ್ಯೆಯನ್ನು ರಾಷ್ಟ್ರಮಟ್ಟದಲ್ಲಿ ಬಿಂಬಿಸುತ್ತಿದ್ದೀರಿ. ದೇಶದಲ್ಲಿ ಈಗಾಗಲೇ ಸಾಕಷ್ಟು ಕೋಮುಗಲಭೆಗಳಿವೆ ಎಂದಿರುವ ಪ್ರಕಾಶ್​ ರಾಜ್​, ಕೇಂದ್ರದಲ್ಲಿರುವ ನಿಮ್ಮ ಸ್ನೇಹಿತರಿಗೆ ಧನ್ಯವಾದಗಳು ಎನ್ನುವ ಮೂಲಕ ಪ್ರಧಾನಿ ಮೋದಿ ಸರ್ಕಾರದ ಕಾಲೆಳೆದಿದ್ದಾರೆ.

See also  ಲಾಡು ಎಫೆಕ್ಟ್ - ತಿರುಪತಿ ಖಾಲಿ ಖಾಲಿ
0 0 votes
Article Rating
Subscribe
Notify of
guest
0 Comments
Inline Feedbacks
View all comments