ಬೆಂಗಳೂರು : ರಸ್ತೆಯಲ್ಲಿ ಸಿಗ್ನಲ್ ಮೀರಿ ದಾಟಿ ಹೋಗೋದು, ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡುವುದು, ಕುಡಿದು ಬೈಕ್ ಕಾರು ಓಡಿಸುವವರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ಕೊಟ್ಟಿದ್ದಾರೆ. ಹೌದು ಇನ್ಮುಂದೆ ಸಂಚಾರ ನಿಯಮ ಪಾಲಿಸದೇ ಇರುವವರಿಗೆ ಚಾಲನಾ ಪರವಾನಗಿಯನ್ನು ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮಹತ್ವದ ಸೂಚನೆ ನೀಡಿದರು.
ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ.ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರು, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸೂಚನೆ ನೀಡಿದರು.
ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು.ಈ ವೇಳೆ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ.ರೇವಣ್ಣ ಸೇರಿ ಹಲವು ಮುಖಂಡರು ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.