ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಯಾದಗಿರಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಶೋಭಾ ಯಾತ್ರೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಯಾದಗಿರಿಯಲ್ಲಿ ಸೆ.21ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪ್ರತಾಪ್ ಸಿಂಹ, ಪ್ರಚೋದನಕಾರಿ ಭಾಷಣ ಮಾಡಿದ್ದರು.

ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರವೃತ್ತಿ ಹಲವೆಡೆ ಕಂಡುಬರುತ್ತಿದೆ. ಇಂತಹ ಪ್ರವೃತ್ತಿ ಮುಸ್ಲಿಂರಿಗೆ ಯಾಕೆ ಬರುತ್ತೆ? ಹಿಂದೂಗಳೂ ಕೈಯಲ್ಲಿ ಕಲ್ಲು ಹಿಡಿದುಕೊಂಡರೆ ನಿಮ್ಮ ಕಥೆಯೇನಾಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ? ಎಂದು ಪ್ರತಾಪ್ ಸಿಂಹ ಗುಡುಗಿದ್ದರು.

ಗುಜರಿಗಳು, ಟಾಂಗಾಗಳು ಮಾಡುವ ಕೆಲಸವನ್ನು ಹಿಂದೂಗಳು ಕ್ಷಣಾರ್ಧದಲ್ಲಿ ಮಾಡುತ್ತಾರೆ ಎಂದು ಹೇಳಿದ್ದರು. ದ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಸಿಂಹ ವಿರುದ್ಧ ಶಹಾಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಪ್ರತಾಪ್ ಸಿಂಹ ಸೇರಿದಂತೆ ಐವರ ವಿರುದ್ಧ ಬಿಎನ್ ಎಸ್ ಕಾಯ್ದೆಯಡಿ 299, 192 ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

See also  ರಾಜ್ಯದ ಎಲ್ಲಾ ಜಿಲ್ಲೆಗಳಿಗೂ 'ಇ-ಆಸ್ತಿ ತಂತ್ರಾಂಶ' ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ
0 0 votes
Article Rating
Subscribe
Notify of
guest
0 Comments
Inline Feedbacks
View all comments