ಬೆಂಗಳೂರು : ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಿತ್ತು. ಮುಸ್ಲಿಂರು ಹೆಚ್ಚಿರುವ ಪ್ರದೇಶಗಳಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯ ಎಂಬ ಸುದ್ದಿಯ ಅಸಲಿಯತ್ತು ಇಲ್ಲಿದೆ.
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಶೇ. 25 ರಷ್ಟು ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಇರುವ ಪ್ರದೇಶದ ಅಂಗನವಾಡಿ ಕೇಂದ್ರಗಳಲ್ಲಿ ಕನ್ನಡ ಭಾಷೆಯೊಂದಿಗೆ ಆಯಾ ಅಲ್ಪಸಂಖ್ಯಾತ ಸಮುದಾಯದ ಭಾಷೆ ಬಲ್ಲವರನ್ನು ಕಾರ್ಯಕರ್ತೆ / ಸಹಾಯಕಿಯ ಹುದ್ದೆಗೆ ಆಯ್ಕೆ ಮಾಡುವುದು, ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದವರಲ್ಲಿ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸಮಾನ ಅಂಕಗಳಿಸಿದ್ದಲ್ಲಿ ವಯೋಹಿರಿತನವನ್ನು ಪರಿಗಣಿಸಬೇಕು.
ವಯಸ್ಸು ಸಮಾನವಾಗಿದ್ದಲ್ಲಿ ವಿಧವೆಯರನ್ನು ಪರಿಗಣಿಸಬೇಕು ಎಂದು ಸರ್ಕಾರದ ಅದೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ S.S.L.C. ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜ ಶಾಸ್ತ್ರ/ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು ಪ್ರಮಾಣ ಪತ್ರ/ಅಂಕಪಟ್ಟಿಯು ಗರಿಷ್ಠ 625 ಕನಿಷ್ಠ 219 ಅಂಕಗಳನ್ನು ಪರಿಗಣಿಸತಕ್ಕದ್ದು. ಹೊಂದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು
ಆ) ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದು, ಕನ್ನಡವನ್ನು ಪ್ರಥಮ/ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿದ್ದರೂ SSLC ಪರೀಕ್ಷೆಗೆ ಆ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಠ ಹಾಗೂ ಕನಿಷ್ಠ ಅಂಕಗಳು ಹಾಗೂ ಕರ್ನಾಟಕ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಟ ಹಾಗೂ ಕನಿಷ್ಟ ಅಂಕದಲ್ಲಿ ವ್ಯತ್ಯಾಸವಿದ್ದಲ್ಲಿ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸತಕ್ಕದ್ದು.
ಇ) ಅಂಗನವಾಡಿ ಸಹಾಯಕಿಯರು ಯಾವುದೇ ಭಾಷಾ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೂ ಹಾಗೂ ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದರೂ ಸಹಾ ಅವರು ಕನ್ನಡ ಭಾಷೆಯನ್ನು ಪ್ರಥಮ /ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡಿರಬೇಕು. ಹಾಗೂ ಮಾತೃಭಾಷೆ ಕನ್ನಡವಲ್ಲದೇ ಇರುವ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯು ಆಯ್ಕೆ ಸಮಯದಲ್ಲಿ ಸಂದರ್ಶನ ಏರ್ಪಡಿಸಿ ಹಾಗೂ ಅವಶ್ಯವಿದ್ದಲ್ಲಿ ಕನ್ನಡ ಭಾಷೆಯ ಜ್ಞಾನದ ಕುರಿತಂತೆ ಓದಿಸಿ, ಬರೆಸಿ ಅವರ ಕನ್ನಡ ಭಾಷಾ ಜ್ಞಾನವನ್ನು ಪರೀಕ್ಷಿಸಿ ಅವರನ್ನು ಆಯ್ಕೆ ಮಾಡುವ ಬಗ್ಗೆ ಸಮಿತಿಯವರು ನಿರ್ಧರಿಸುವುದು.
VI ಜನಸಂಖ್ಯಾ ಆಧಾರದ ಮೇಲೆ ಮೀಸಲಾತಿ :-
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಶೇ. 25 ರಷ್ಟು ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಇರುವ ಪ್ರದೇಶದ ಅಂಗನವಾಡಿ ಕೇಂದ್ರಗಳಲ್ಲಿ ಕನ್ನಡ ಭಾಷೆಯೊಂದಿಗೆ ಆಯಾ ಅಲ್ಪಸಂಖ್ಯಾತ ಸಮುದಾಯದ ಭಾಷೆ ಬಲ್ಲವರನ್ನು ಕಾರ್ಯಕರ್ತೆ / ಸಹಾಯಕಿಯ ಹುದ್ದೆಗೆ ಆಯ್ಕೆ ಮಾಡುವುದು, ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದವರಲ್ಲಿ ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳು ಸಮಾನ ಅಂಕಗಳಿಸಿದ್ದಲ್ಲಿ ವಯೋಹಿರಿತನವನ್ನು ಪರಿಗಣಿಸಬೇಕು. ವಯಸ್ಸು ಸಮಾನವಾಗಿದ್ದಲ್ಲಿ ವಿಧವೆಯರನ್ನು ಪರಿಗಣಿಸಬೇಕು.
ಅಂಗನವಾಡಿ ಕೇಂದ್ರಗಳ ವ್ಯಾಪ್ತಿ ಗುರುತಿಸುವಿಕೆ:
1. ಒಂದು ಗ್ರಾಮದಲ್ಲಿ ಈಗಾಗಲೇ ಅಂಗನವಾಡಿ ಕೇಂದ್ರವಿದ್ದು ಪುನಃ ಬೇಡಿಕೆಗೆ ಅನುಸಾರವಾಗಿ ಹೊಸ ಕೇಂದ್ರವನ್ನು ಪ್ರಾರಂಭಿಸುತ್ತಿದ್ದಲ್ಲಿ ಹೊಸ ಕೇಂದ್ರ ಪ್ರಾರಂಭಿಸುವ ಪ್ರದೇಶದ (ವ್ಯಾಪ್ತಿಯ) ಜನಸಂಖ್ಯೆಯಲ್ಲಿ ಶೇ. 40ಕ್ಕಿಂತ ಹೆಚ್ಚು ಜನಸಂಖ್ಯೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವರಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಸದರಿ ವರ್ಗದವರಿಗೆ ಕಾರ್ಯಕರ್ತೆ/ಸಹಾಯಕಿ ಹುದ್ದೆಯನ್ನು ನಿಗದಿಪಡಿಸಿ ಪ್ರಕಟಣೆ ಹೊರಡಿಸಿ ಸದರಿ ಗ್ರಾಮ/ನಗರ ಪ್ರದೇಶದಲ್ಲಿ ಕಂದಾಯ ವಾರ್ಡ್‌ನಿಂದ ಅರ್ಜಿಗಳನ್ನು ಆಹ್ವಾನಿಸಿ ಆ ವರ್ಗದವರನ್ನೇ ಆಯ್ಕೆ ಮಾಡುವುದು.