ಹಗರಿಬೊಮ್ಮನಹಳ್ಳಿ | ಕೆಕೆಆರ್‌ಟಿಸಿ ಬಸ್ ಪಲ್ಟಿ

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಮಾಲವಿ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ ಕೆಕೆಆರ್‌ಟಿಸಿ ಬಸ್ ಉರುಳಿಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಹೊಸಪೇಟೆಯಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಬಸ್ ವಾಹನ ಒಂದನ್ನು ಹಿಂದಿಕ್ಕಲು ಯತ್ನಿಸಿದಾಗ ಎದುರಿಗೆ ಲಾರಿ ಬಂದಿದೆ.

ಅಪಘಾತ ಆಗುವುದನ್ನು ತಪ್ಪಿಸಲು ಬಸ್ ಚಾಲಕ ಬಸ್ಸನ್ನು ಪಕ್ಕಕ್ಕೆ ಕೊಂಡೊಯ್ದಿದ್ದಾನೆ. ಆಗ ಚಾಲಕನ ನಿಯಂತ್ರಣಕ್ಕೆ ಸಿಗದೆ ಬಸ್ ಉರುಳಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್‌ನ ಗಾಜುಗಳು ಒಡೆದಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಸ್ ಪಲ್ಟಿಯಾಗುತ್ತಿದ್ದಂತೆಯೇ ಪ್ರಯಾಣಿಕರು ಕಂಗಲಾಗಿ ಕೂಗಿಕೊಂಡರು, ಅಕ್ಕಪಕ್ಕದ ಜಮೀನುಗಳಲ್ಲಿದ್ದ ರೈತರು ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತಂದರು.

ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಬಸ್ ಡಿಪೋ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

See also  ನಾಡಿನ ಅಹಿಂದ ನಾಯಕರ ಉದಯ ಮತ್ತು ಪ್ರಗತಿ
0 0 votes
Article Rating
Subscribe
Notify of
guest
1 Comment
Inline Feedbacks
View all comments
Suman
Suman
2 months ago

Very sad