ಬೆಂಗಳೂರು, ಸೆಪ್ಟೆಂಬರ್ 24: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಲಾಗಿದ್ದು, ಸಿದ್ದರಾಮಯ್ಯಗೆ ಬಿಗ್ ಶಾಕ್ ಎದುರಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಇಂದೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡ್ತಾರಾ ಎನ್ನುವ ಪ್ರಶ್ನೆ ಎದುರಾಗಿದ್ದು, ಸಿದ್ದರಾಮಯ್ಯ ನಡೆ ಕುರಿತು ಕುತೂಹಲ ಮೂಡಿದೆ.