ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಮೈಸೂರು ಪ್ರವಾಸ

ಬೆಂಗಳೂರು, ಸೆಪ್ಟೆಂಬರ್ 26: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿದೆ. ಮೈಸೂರು ಲೋಕಾಯುಕ್ತ ವಿಭಾಗದ ಪೊಲೀಸರು ತನಿಖೆ ನಡೆಸಬೇಕು ಎಂದು ಕೋರ್ಟ್ ಸೂಚಿಸಿದೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ದಿನಗಳ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಈ ನಡೆ ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ತನಿಖೆ ನಡೆಯಬೇಕು ಎಂದು ತೀರ್ಪು ನೀಡಿತ್ತು. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತದ ಮೈಸೂರು ವಿಭಾಗ ತನಿಖೆ ನಡೆಸಿ, ಮೂರು ತಿಂಗಳಿನಲ್ಲಿ ವರದಿ ನೀಡಬೇಕು ಎಂದು ಬುಧವಾರ ತೀರ್ಪು ನೀಡಿತ್ತು.

See also  ಪ್ರಾಸಿಕ್ಯೂಷನ್ ಸಮರ: ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕಾಂಗ್ರೆಸ್
0 0 votes
Article Rating
Subscribe
Notify of
guest
0 Comments
Inline Feedbacks
View all comments