ಉಗ್ರರ ದಾಳಿ ಎಚ್ಚರಿಕೆ: ಮುಂಬೈಯಾದ್ಯಂತ ಪೊಲೀಸ್ ಕಟ್ಟೆಚ್ಚರ

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಉಗ್ರರ ದಾಳಿ ಬೆದರಿಕೆ ಬಗ್ಗೆ ಕೇಂದ್ರೀಯ ಸಂಸ್ಥೆಗಳು ಎಚ್ಚರಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರ ಕಟೆಚ್ಚರಕ್ಕೆ ಸೂಚಿಸಲಾಗಿದೆ.ಮುಂಬೈನ ಧಾರ್ಮಿಕ ಕೇಂದ್ರಗಳು, ಮಾರುಕಟ್ಟೆ, ಶಾಪಿಂಗ್ ಮಾಲ್, ಇತರ ಜನನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಮಾಕ್ ಡ್ರಿಲ್ ನಡೆಸಲು ಪೊಲೀಸ್ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ. ಮುಂಬೈ ನಗರ ಡಿಸಿಪಿ ತಮ್ಮ ತಮ್ಮ ವಲಯಗಳಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ವಿಶೇಷ ನಿಗಾ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಾವುದೇ ಅನುಮಾನಾಸ್ಪದ ವಸ್ತು, ವ್ಯಕ್ತಿ ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ನಗರದ ದೇವಸ್ಥಾನಗಳಿಗೆ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

ಅದ್ಧೂರಿ ಗಣೇಶ ಚತುರ್ಥಿ ಆಚರಿಸಿದ್ದ ವಾಣಿಜ್ಯ ನಗರಿ ಮುಂಬೈ ಇದೀಗ ನವರಾತ್ರಿ ದುರ್ಗಾ ಪೂಜೆ, ದಸರಾ, ಹಾಗೂ ದೀಪಾವಳಿ ಹಬ್ಬಕ್ಕೆ ಸಜ್ಜಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.

See also  ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ಸಿನ ಬೆನ್ನೆಲುಬಾಗಿದ್ದಾರೆ : ಬಿಜೆಪಿ ಶಾಸಕ
0 0 votes
Article Rating
Subscribe
Notify of
guest
0 Comments
Inline Feedbacks
View all comments