ಅವನು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ : HDK ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ADGP ಚಂದ್ರಶೇಖರ್!

ಬೆಂಗಳೂರು : ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ಅವರ ಅಕ್ರಮಗಳ ಕುರಿತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಇಂದು ಆರೋಪ ಮಾಡಿದ್ದರು ಇವರ ಒಂದು ಆರೋಪಕ್ಕೆ ಇದೀಗ ಎಡಿಜಿಪಿ ಚಂದ್ರಶೇಖರ್ ಅವರು ಏಕವಚನದಲ್ಲಿರುವ ವಾಗ್ದಾಳಿ ನಡೆಸಿದ್ದು ಅವನು ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಆತನೊಬ್ಬ ಆರೋಪಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಎಡಿಜಿಪಿ ಚಂದ್ರಶೇಖರ್ ವಿರುದ್ಧ ಕುಮಾರಸ್ವಾಮಿ ಗಂಭೀರವಾದಂತಹ ಆರೋಪ ಮಾಡಿದ್ದರು. ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಆರೋಪಕ್ಕೆ ಇದೀಗ ಚಂದ್ರಶೇಖರ್ ಟಾಂಗ್ ನೀಡಿದ್ದಾರೆ. ತಮ್ಮ ಸಿಬ್ಬಂದಿಗೆ ಪತ್ರದ ಮೂಲಕ ಎಡಿಜಿಪಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣ ಒಂದರ ಆರೋಪಿ ಎಂದು ಪತ್ರ ಪ್ರಾರಂಭಿಸಿರುವ ಚಂದ್ರಶೇಖರ್, ಇಂದು ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ನನ್ನ ಮೇಲೆ ಹೆಚ್‍ಡಿ ಕುಮಾರಸ್ವಾಮಿ ಸುಳ್ಳು ಆರೋಪದ ಜೊತೆಗೆ ಬೆದರಿಕೆ ಹಾಕಿದ್ದಾರೆ.ಎಸ್‌ಐಟಿ ಸಮಕ್ಷಮ ಪ್ರಾಧಿಕಾರದಿಂದ ಪ್ರಾಸಿಕ್ಯೂಷನ್ ಮಂಜೂರಾತಿ ಕೋರಿದೆ. ಆರೋಪಿ ಹೆಚ್‍ಡಿ ಕುಮಾರಸ್ವಾಮಿ ಜಾಮೀನು ಪಡೆದಿದ್ದಾರೆ.ನಮ್ಮನ್ನು ಕುಗ್ಗಿಸುವ ಪ್ರಯತ್ನ ಹಾಗೂ ಭಯ ಹುಟ್ಟಿಸುವ ಉದ್ದೇಶ ಹೊಂದಿದ್ದಾರೆ. ಅವನು ಎಷ್ಟೇ ಉನ್ನತ ಸ್ಥಾನದಲ್ಲಿದ್ದರು ಆತನೊಬ್ಬ ಆರೋಪಿ. ಇಂಥ ಆರೋಪ ಮತ್ತು ಬೆದರಿಕೆಗಳಿಂದ ನಾವು ನಿರಾಶೆಗೊಳ್ಳಬಾರದು. ಎಸ್‌ಐಟಿ ಮುಖ್ಯಸ್ಥನಾಗಿ ನಾನು ಭಯವಿಲ್ಲದೆ ಕೆಲಸ ಮಾಡುತ್ತೇನೆ. ಪ್ರಕರಣದ ಸತ್ಯ ಹೊರಗೆ ತರುತ್ತೇನೆ. ಎಲ್ಲಾ ಬಾಹ್ಯ ಪ್ರಭಾವದಿಂದ ನಿಮ್ಮನ್ನು ರಕ್ಷಿಸುತ್ತೇನೆ ಎಂದು ಎಸ್‌ಐಟಿ ಅಧಿಕಾರಿ ಸಿಬ್ಬಂದಿಗೆ ಚಂದ್ರಶೇಖರ್ ಭರವಸೆ ನೀಡಿದ್ದಾರೆ. ಹಂದಿಗಳೊಂದಿಗೆ ಎಂದಿಗೂ ಜಗಳಕ್ಕೆ ಇಳಿಯಬೇಡಿ. ಹಂದಿಗಳ ಜೊತೆ ಜಗಳಕ್ಕೆ ಇಳಿದರೆ ನಾವು ಕೊಳಕರಾಗುತ್ತೇವೆ. ಯಾಕೆಂದರೆ ಹಂದಿಗಳು ಕೊಳಕನ್ನೇ ಇಷ್ಟಪಡುತ್ತವೆ ಎಂದಿದ್ದಾರೆ.

ಆದರೆ ನಮ್ಮ ಕರ್ತವ್ಯವನ್ನು ನಾವು ನಿರ್ವಹಿಸುತ್ತೇವೆ. ಅಪರಾಧಿಗಳು ಆರೋಪಿಗಳನ್ನು ಎದುರಿಸುವುದು ನಾವು ತಪ್ಪಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ನಾವು ಎದುರಿಸುವ ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ಇದು ನಮ್ಮ ಕರ್ತವ್ಯವನ್ನು ನಿರ್ವಹಿಸುವುದರಿಂದ ನಮ್ಮನ್ನು ತಡೆಯಬಾರದು. ಎಂದಿಗೂ ಭರವಸೆಯನ್ನು ಕಳೆದುಕೊಳ್ಳದಿರಿ. ಏಕೆಂದರೆ ಸತ್ಯವು ಯಾವಾಗಲೂ ಜಯಗಳಿಸುತ್ತದೆ. ಸತ್ಯ, ದೇವರು ಮತ್ತು ನಮ್ಮ ಕಾನೂನಿನಲ್ಲಿ ನಂಬಿಕೆ ಇರಲಿ. ಸತ್ಯಮೇವ ಜಯತೆ ಎಂದು ಪತ್ರದ ಮೂಲಕ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.

See also  ನಿರ್ಮಲಾ ಸೀತಾರಾಮನ್ ವಿರುದ್ಧ SIT ಇಲ್ಲ
0 0 votes
Article Rating
Subscribe
Notify of
guest
0 Comments
Inline Feedbacks
View all comments