ದರ್ಶನ್​​​​ಗೆ ಭಾರೀ ಆಘಾತ, ಜೈಲೇ ಗತಿ!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ನಟ ದರ್ಶನ್​​​ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್​ ಇಂದು ನಡೆಸಿದ್ದು ಅ.4ಕ್ಕೆ ಮುಂದೂಡಿ ಆದೇಶಿಸಿದೆ.​

ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್​​ ನ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಡಿಯೋ ಕಾನ್ಫರೆನ್ಸ್​​ ಮೂಲಕ ನಡೆಸಿರುವ 57ನೇ CCH ಕೋರ್ಟ್ ಈ ಆದೇಶವನ್ನು ನೀಡಿದೆ.

ಇನ್ನು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ದರ್ಶನ್​​ಗೆ ಮತ್ತೆ ಆಘಾತ ಆಗಿದೆ.

ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಜೈ.ಶಂಕರ್ ಅವರು ಎಸ್​​ಪಿಪಿಗೆ ಆಕ್ಷೇಪಣೆ ಸಲ್ಲಿಸುವಂತೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ಇಂದಿಗೆ ಮುಂದೂಡಿದ್ದರು. ಹತ್ಯೆ ಕೇಸ್​​​​ನಲ್ಲಿ ದರ್ಶನ್​​​​ ಜೈಲು ಸೇರಿ 100 ದಿನಗಳ ನಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ದರ್ಶನ್​​ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಅವರು ವಾದ ಮಂಡಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಬೇಲ್​​​ ಅರ್ಜಿ ವಿಚಾರಣೆ ಕೋರ್ಟ್​ ಮುಂದೂಡಿದೆ.

ಈ ಮೊದಲ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್​​​​​​ಗೆ ಅಲ್ಲಿ ರಾಜಾತಿಥ್ಯ ಅನುಭವಿಸಿದ್ದ ಪ್ರಕರಣ ಸದ್ದು ಮಾಡಿದ ಬೆನ್ನಲ್ಲೇ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು.

See also   ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
0 0 votes
Article Rating
Subscribe
Notify of
guest
0 Comments
Inline Feedbacks
View all comments