‘ನಮ್ಮ ಮೆಟ್ರೋ’ ಪ್ರಯಾಣಿಕರೇ ಗಮನಿಸಿ : ನಾಳೆ ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ |Namma Metro

ಬೆಂಗಳೂರು : ಹಸಿರು ಮಾರ್ಗದ ನಾಗಸಂದ್ರ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶ ಮೆಟ್ರೋ ನಿಲ್ದಾಣಗಳ ನಡುವೆ ಅಕ್ಟೋಬರ್ 3 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ ʼನಮ್ಮ ಮೆಟ್ರೋʼ ರೈಲು ಸಂಚಾರ ಇರುವುದಿಲ್ಲ.

ನಾಗಸಂದ್ರ ಮತ್ತು ಮಾದಾವರ ಮೆಟ್ರೋ ನಿಲ್ದಾಣಗಳ ನಡುವಿನ ಹೊಸ ರೈಲು ಮಾರ್ಗದಲ್ಲಿ ರೈಲು ಸುರಕ್ಷತಾ ಆಯುಕ್ತರಿಂದ ʼಶಾಸನಬದ್ಧ ಸುರಕ್ಷತಾ ತಪಾಸಣೆʼ ನಡೆಯುವುದರಿಂದ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬಿಎಂಆರ್ಸಿಎಲ್ ಪ್ರಕಟಣೆ ತಿಳಿಸಿದೆ.

ಪೀಣ್ಯ ಕೈಗಾರಿಕೆ ಪ್ರದೇಶ ಮೆಟ್ರೋ ನಿಲ್ದಾಣದಿಂದ ರೇಷ್ಮೆ ಸಂಸ್ಥೆ ನಿಲ್ದಾಣದವರೆಗೆ ನಮ್ಮ ಮೆಟ್ರೋ ಸಂಚಾರ ಎಂದಿನಂತೆ ಇರುತ್ತದೆ ಎಂದು ಹೇಳಿದೆ.

See also  ಬೆಳಗಾವಿಗೆ ಬರಾಕ್‌ ಒಬಾಮಾ?
0 0 votes
Article Rating
Subscribe
Notify of
guest
0 Comments
Inline Feedbacks
View all comments