ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ನಾಳೆ(ಶನಿವಾರ)ಭಾರಿ ಮಳೆ ಸುರಿಯುವ ಸಂಭವ ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಬಳ್ಳಾರಿ, ಚಾಮರಾಜನಗರ, ವಿಜಯನಗರ, ಶಿವಮೊಗ್ಗ, ಹಾಸನ, ಮಂಡ್ಯ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶನಿವಾರ ಅತ್ಯಧಿಕ ಮಳೆಯಾಗಲಿದೆ.
ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಹಳದಿ ಅಲರ್ಟ್ ಘೋಷಣೆ ಮಾಡಿದೆ.
ಬೆಂಗಳೂರಿನಲ್ಲಿ ಅ.7ರಂದು ಹೆಚ್ಚಿನ ಮಳೆಯಾಗಲಿದೆ. ಇನ್ನು ಚಾಮರಾಜನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ. ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳು ಕಡಿಮೆ ಇದೆ ಎಂದು ಇಲಾಖೆ ಹೇಳಿದೆ.