ಛತ್ತೀಸ್‌ಗಢ: ನಾರಾಯಣಪುರ ಮತ್ತು ದಾಂತೇವಾಡ ಪೊಲೀಸ್ ಪಡೆಗಳು ಶುಕ್ರವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ 36 ನಕ್ಸಲರನ್ನು ಹೊಡೆದುರುಳಿಸಲಾಗಿದೆ.
ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್‌ಮದ್ ಪ್ರದೇಶದ ದಟ್ಟ ಅರಣ್ಯದಲ್ಲಿ ಕನಿಷ್ಠ 36 ನಕ್ಸಲರನ್ನು ತಟಸ್ಥಗೊಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ನಾರಾಯಣಪುರ-ದಂತೇವಾಡ ಅಂತರ ಜಿಲ್ಲಾ ಗಡಿಯಲ್ಲಿರುವ ಅಬುಜ್‌ಮದ್ ಅರಣ್ಯದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹತ್ಯೆಯಾದ ಮಾವೋವಾದಿಗಳ ದೇಹಗಳು ಮತ್ತು ಅವರ ಬಳಿ ಎಕೆ -47 ರೈಫಲ್ ಮತ್ತು ಒಂದು ಎಸ್‌ಎಲ್‌ಆರ್ (ಸೆಲ್ಫ್-ಲೋಡಿಂಗ್ ರೈಫಲ್) ಸೇರಿದಂತೆ ಹಲವು ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.