ಮಹಾರಾಷ್ಟ್ರದಲ್ಲಿ ಜಂಗಲ್ ರಾಜ್ – ಬಾಬಾ ಸಿದ್ದಿಕಿ ಹತ್ಯೆಗೆ ರಾಗಾ ಕಿಡಿ

ಮುಂಬೈ : ಇಫ್ತಾರ್‌ ಕೂಟ ಹಾಗೂ ಅದ್ಧೂರಿ ಪಾರ್ಟಿಗಳನ್ನು ಆಯೋಜಿಸುವ ಮೂಲಕ ಹೆಸರುವಾಸಿಯಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಇದೇ ವಿಚಾರಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ರಾಹುಲ್ ಗಾಂಧಿ, ಶಿವಸೇನೆ-ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ಮಹಾರಾಷ್ಟ್ರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ನಾಗರೀಕರಿಗೆ ಶಾಂತಿ ಇಲ್ಲ. ಸಿದ್ದಿಕಿ ಹತ್ಯೆ ನಿಜಕ್ಕೂ ಶೋಚನೀಯ ಹಾಗೂ ನಾವೆಲ್ಲರೂ ತಲೆತಗ್ಗಿಸಬೇಕಾದ ವಿಚಾರ ಎಂದು ರಾಹುಲ್ ಗಾಂಧಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಶನಿವಾರ ರಾತ್ರಿ 9.30 ಗಂಟೆ ಸುಮಾರಿಗೆ ಬಾಬಾ ಸಿದ್ಧಿಕಿ ಅವರ ಮೇಲೆ ಮೂರು ಬುಲೆಟ್‌ಗಳನ್ನು ಹಾರಿಸಲಾಗಿತ್ತು. ಅವರ ಮಗ ಜೀಶನ್‌ ಸಿದ್ದಿಕಿ ಅವರ ಕಚೇರಿಯಲ್ಲಿ ಈ ದಾಳಿ ನಡೆದಿತ್ತು. ಜೀಶನ್‌ ಬಾಂದ್ರಾ ಪೂರ್ವದ ಶಾಸಕರಾಗಿದ್ದಾರೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

See also  'ನಮ್ಮ ಮೆಟ್ರೋ' ಪ್ರಯಾಣಿಕರೇ ಗಮನಿಸಿ : ನಾಳೆ ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯ |Namma Metro
0 0 votes
Article Rating
Subscribe
Notify of
guest
0 Comments
Inline Feedbacks
View all comments