ನಟ ಸುದೀಪ್ ತಾಯಿ ಸರೋಜಾ ನಿಧನ

ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ಜಯನಗರದ ಅಪೋಲೊ ಆಸ್ಪತ್ರೆಗೆ ಸುದೀಪ್ ಅವರ ತಾಯಿಯನ್ನು ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 07:04 ಕ್ಕೆ ಸುದೀಪ್​ರ ತಾಯಿ ನಿಧನ ರಾಗಿದ್ದಾರೆ. ತಾಯಿಯ ಅನಾರೋಗ್ಯದ ಕಾರಣಕ್ಕೆ ನಿನ್ನೆ ಬಿಗ್​ಬಾಸ್ ಶೂಟಿಂಗ್ ಅನ್ನು ಬೇಗನೆ ಮುಗಿಸಿ ಹೋಗಿದ್ದಾರೆ ಸುದೀಪ್. ನಿನ್ನೆಯ ವಾರದ ಪಂಚಾಯಿತಿ, ಸಾಮಾನ್ಯಕ್ಕಿಂತಲೂ ಕಡಿಮೆ ಅವಧಿಗೆ ಪ್ರಸಾರವಾಗಿತ್ತು.

See also  ಬೆಂಗಳೂರಿನಲ್ಲಿ ಸತತ ಮಳೆ; ಶಾಲೆಗಳಿಗೆ ರಜೆ
0 0 votes
Article Rating
Subscribe
Notify of
guest
0 Comments
Inline Feedbacks
View all comments