ರೈಲ್ವೇ ಪರೀಕ್ಷೆಯಲ್ಲಿ ಇನ್ನು ಕನ್ನಡ ಕಡ್ಡಾಯ: ಕೇಂದ್ರ ಸಚಿವ ಸೋಮಣ್ಣ
ದಾವಣಗೆರೆ: ರೈಲ್ವೇ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇನ್ನು ಕಡ್ಡಾಯವಾಗಿ ಕನ್ನಡದಲ್ಲೂ ಬರೆಯಲು ಅವಕಾಶ ಮಾಡಿಕೊಡಲಾಗುವುದು ಎಂದು ರೈಲ್ವೇ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕೆಂದು 40 ವರ್ಷಗಳ ಬೇಡಿಕೆ ಇತ್ತು. ಈ ವರ್ಷ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಇನ್ನು ಇದನ್ನು ಕಡ್ಡಾಯಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರೈಲ್ವೇ ಇಲಾಖೆಯ ಎಲ್ಲ ಹೊರ ರಾಜ್ಯದ…