Munnudi News

ಪೋಕ್ಸೋ ಕಾಯ್ದೆಯಡಿ ಮೊದಲ ಗಲ್ಲು ಶಿಕ್ಷೆಯ ತೀರ್ಪು

ಗುವಾಹಟಿ : 2019 ಮತ್ತು 2022 ರ ನಡುವೆ ನಾಲ್ಕು ವರ್ಷಗಳ ಕಾಲ ಎಂಟು ಹುಡುಗರು ಮತ್ತು 13 ಹುಡುಗಿಯರು 21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸರ್ಕಾರಿ ವಸತಿ ಶಾಲೆಯ ಮಾಜಿ ಹಾಸ್ಟೆಲ್ ವಾರ್ಡನ್‌ ಯುಮ್ಕೆನ್ ಬಾಗ್ರಾಗೆ ಅರುಣಾಚಲ ಪ್ರದೇಶದ ವಿಶೇಷ ಪೋಕ್ಸೊ ನ್ಯಾಯಾಲಯ ಗುರುವಾರ ಮರಣದಂಡನೆ ವಿಧಿಸಿದೆ.ದೌರ್ಜನ್ಯ ಉಂಟಾದ ಸಮಯದಲ್ಲಿ ಹುಡುಗಿಯರು ಆರರಿಂದ 15 ವರ್ಷ ವಯಸ್ಸಿನವರು ಮತ್ತು ಹುಡುಗರು ಏಳು ರಿಂದ 16 ವರ್ಷ ವಯಸ್ಸಿನವರಾಗಿದ್ದರು. ಸಂತ್ರಸ್ತರಲ್ಲಿ ನಾಲ್ವರು ಆತ್ಮಹತ್ಯೆಗೂ ಯತ್ನಿಸಿದ್ದರು.

Read More

ಕ್ರಿಕೆಟ್ ಗೆ ‘ಡ್ವೇನ್ ಬ್ರಾವೋ’ ನಿವೃತ್ತಿ ಘೋಷಣೆ

ಕೆರಿಬಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) 2024 ಅಭಿಯಾನಕ್ಕೆ ಆರಂಭಿಕ ಅಂತ್ಯ ಹಾಡಿದ ನಂತರ ವೆಸ್ಟ್ ಇಂಡೀಸ್ನ ಮಾಜಿ ದಿಗ್ಗಜ ಡ್ವೇನ್ ಬ್ರಾವೋ ಎಲ್ಲಾ ಮಾದರಿಯ ಕ್ರಿಕೆಟ್ ಗೆನಿವೃತ್ತಿ ಘೋಷಿಸಿದ್ದಾರೆ ಮುಂದಿನ ತಿಂಗಳು 41ನೇ ವರ್ಷಕ್ಕೆ ಕಾಲಿಡಲಿರುವ ಬ್ರಾವೋ, ಟಿ20 ಕ್ರಿಕೆಟ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. 582 ಪಂದ್ಯಗಳಲ್ಲಿ 631 ವಿಕೆಟ್ ಹಾಗೂ 6970 ರನ್ ಗಳಿಸಿದ್ದಾರೆ. “ವೃತ್ತಿಪರ ಕ್ರಿಕೆಟಿಗನಾಗಿ ಇಪ್ಪತ್ತೊಂದು ವರ್ಷಗಳು – ಇದು ನಂಬಲಾಗದ ಪ್ರಯಾಣವಾಗಿದೆ, ಅನೇಕ ಏರಿಳಿತಗಳು ಮತ್ತು…

Read More

ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಮೈಸೂರು ಪ್ರವಾಸ

ಬೆಂಗಳೂರು, ಸೆಪ್ಟೆಂಬರ್ 26: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿದೆ. ಮೈಸೂರು ಲೋಕಾಯುಕ್ತ ವಿಭಾಗದ ಪೊಲೀಸರು ತನಿಖೆ ನಡೆಸಬೇಕು ಎಂದು ಕೋರ್ಟ್ ಸೂಚಿಸಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ದಿನಗಳ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಈ ನಡೆ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಹೈಕೋರ್ಟ್ ಅರ್ಜಿಯನ್ನು…

Read More

ಬಿಲ್ಕಿಸ್ ಬಾನು ಪ್ರಕರಣ : ಅಪರಾಧಿಗಳ ಬಿಡುಗಡೆ ಆದೇಶ ಮರು ಪರಿಶೀಲನೆಗೆ ‘ಸುಪ್ರೀಂ’ ನಕಾರ

ನವದೆಹಲಿ : ಬಿಲ್ಕಿಸ್ ಬಾನು ಪ್ರಕರಣದಲ್ಲಿ ಗುಜರಾತ್ ಸರ್ಕಾರದ ವಿರುದ್ಧದ ಆರೋಪಗಳನ್ನ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. 2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಜನರನ್ನ ಶೀಘ್ರವಾಗಿ ಬಿಡುಗಡೆ ಮಾಡುವುದು ಈ ಪ್ರಕರಣದಲ್ಲಿ ಒಳಗೊಂಡಿದೆ. ತನ್ನ ತೀರ್ಪಿನಿಂದ ಕೆಲವು ಅಂಶಗಳನ್ನ ತೆಗೆದುಹಾಕುವಂತೆ ಗುಜರಾತ್ ಸರ್ಕಾರ ಮಾಡಿದ ಮನವಿ ಆಧಾರರಹಿತವಾಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಗಲಭೆಯಲ್ಲಿ ವ್ಯವಸ್ಥಿತ ಸಮಸ್ಯೆಗಳನ್ನು ಎತ್ತಿ ತೋರಿಸಿದ ವೈಯಕ್ತಿಕ…

Read More

ಶಾಲಾ ಮಕ್ಕಳ ಸುರಕ್ಷತೆಗೆ ಮಾರ್ಗಸೂಚಿಗಳ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ನವದೆಹಲಿ: ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಶಾಲಾ ನಿರ್ವಹಣೆಯನ್ನು ಜವಾಬ್ದಾರರನ್ನಾಗಿ ಮಾಡುವ ಮತ್ತು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಪಾತ್ರವನ್ನು ವ್ಯಾಖ್ಯಾನಿಸುವ ಕೇಂದ್ರ ಸರ್ಕಾರದ 2021 ರ ಮಾರ್ಗಸೂಚಿಗಳನ್ನು ಜಾರಿಗೆ ತರಲು ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ ನೊಬೆಲ್ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿಯಾ ನೇತೃತ್ವದ ಬಚ್ಪನ್ ಬಚಾವೋ ಆಂದೋಲನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಲೇವಾರಿ ಮಾಡುವಾಗ ಅನುಸರಣೆಯ ವರದಿಗಳನ್ನು ಕೇಳುವ ಮೂಲಕ ತನ್ನ ಆದೇಶದ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡುವಂತೆ…

Read More

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ?

ಬೆಂಗಳೂರು, ಸೆಪ್ಟೆಂಬರ್ 24: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ಹೈಕೋರ್ಟ್​ ಎತ್ತಿ ಹಿಡಿದಿದೆ. ಪ್ರಾಸಿಕ್ಯೂಷನ್‌ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಲಾಗಿದ್ದು, ಸಿದ್ದರಾಮಯ್ಯಗೆ ಬಿಗ್‌ ಶಾಕ್‌ ಎದುರಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭವಾಗಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ…

Read More

ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ತಮ್ಮ ವಿರುದ್ಧ ಅಭಿಯೋಜನೆಗೆ ಪೂರ್ವಾನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಕಾನೂನು ಸಮರ ಸಾರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೊದಲ ಹಂತದಲ್ಲಿ ಹೈಕೋರ್ಟ್‌ನಲ್ಲಿ ಹಿನ್ನಡೆ ಉಂಟಾಗಿದೆ. ಅರ್ಜಿದಾರರ (ಸಿದ್ದರಾಮಯ್ಯ) ಕುಟುಂಬಕ್ಕೆ ಸೇರಿದವರೇ (ಪತ್ನಿ) ಫ‌ಲಾನುಭವಿಯಾಗಿರುವ ಹಿನ್ನೆಲೆಯಲ್ಲಿ ತನಿಖೆ ಅಗತ್ಯವಾಗಿದೆ ಎಂದು ಹೈಕೋರ್ಟ್‌ ಸುದೀರ್ಘ‌ 197 ಪುಟಗಳ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿರುವ ಕಾರಣ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್‌ 17ಎ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ…

Read More

ಬಳ್ಳಾರಿಯಲ್ಲಿ ಸೆಪ್ಟೆಂಬರ್ 27ರಂದು ಮಿನಿ ಉದ್ಯೋಗ ಮೇಳ

ಬಳ್ಳಾರಿ, ಸೆಪ್ಟೆಂಬರ್ 25: ಬಳ್ಳಾರಿ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಯುವಕ/ ಯುವತಿಯರಿಗೆ ಸಿಹಿಸುದ್ದಿಯೊಂದಿದೆ. ಜಿಲ್ಲೆಯಲ್ಲಿ ಮಿನಿ ಉದ್ಯೋಗ ಮೇಳ, ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸ್ವ-ವಿವರ, ಅಗತ್ಯ ಪ್ರಮಾಣ ಪತ್ರಗಳ ಜೊತೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬೇಕು, ತರಬೇತಿಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಕರೆ ನೀಡಲಾಗಿದೆ. ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಮಿನಿ ಉದ್ಯೋಗ ಮೇಳ ಆಯೋಜನೆ…

Read More

ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ‘ಇ-ಆಸ್ತಿ ತಂತ್ರಾಂಶ’ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ‘ಇ-ಆಸ್ತಿ ತಂತ್ರಾಂಶ’ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ಈಗಾಗಲೇ ಸಂಯೋಜಿಸಲಾಗಿದ್ದು, ಈ ತಂತ್ರಾಂಶದ ಸಂಯೋಜನೆಯನ್ನು ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಲಾಗಿದೆ. (18 ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಉಡುಪಿ, ಕಾರವಾರ, ಮಂಗಳೂರು, ಧಾರವಾಡ, ವಿಜಯಪುರ, ವಿಜಯನಗರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಯಾದಗಿರಿ, ತುಮಕೂರು,…

Read More

ಹಗರಿಬೊಮ್ಮನಹಳ್ಳಿ | ಕೆಕೆಆರ್‌ಟಿಸಿ ಬಸ್ ಪಲ್ಟಿ

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಮಾಲವಿ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ ಕೆಕೆಆರ್‌ಟಿಸಿ ಬಸ್ ಉರುಳಿಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಹೊಸಪೇಟೆಯಿಂದ ಶಿವಮೊಗ್ಗ ಕಡೆಗೆ ಹೊರಟಿದ್ದ ಬಸ್ ವಾಹನ ಒಂದನ್ನು ಹಿಂದಿಕ್ಕಲು ಯತ್ನಿಸಿದಾಗ ಎದುರಿಗೆ ಲಾರಿ ಬಂದಿದೆ. ಅಪಘಾತ ಆಗುವುದನ್ನು ತಪ್ಪಿಸಲು ಬಸ್ ಚಾಲಕ ಬಸ್ಸನ್ನು ಪಕ್ಕಕ್ಕೆ ಕೊಂಡೊಯ್ದಿದ್ದಾನೆ. ಆಗ ಚಾಲಕನ ನಿಯಂತ್ರಣಕ್ಕೆ ಸಿಗದೆ ಬಸ್ ಉರುಳಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‌ನ ಗಾಜುಗಳು ಒಡೆದಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದ್ದಾರೆ….

Read More

ಅಂಗನವಾಡಿ ಉದ್ಯೋಗಕ್ಕೆ ‘ಉರ್ದು’ ಕಡ್ಡಾಯವೇ.?: ಇಲ್ಲಿದೆ ಅಸಲಿ ಸತ್ಯ

ಬೆಂಗಳೂರು : ಅಂಗನವಾಡಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಿತ್ತು. ಮುಸ್ಲಿಂರು ಹೆಚ್ಚಿರುವ ಪ್ರದೇಶಗಳಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಉರ್ದು ಕಡ್ಡಾಯ ಎಂಬ ಸುದ್ದಿಯ ಅಸಲಿಯತ್ತು ಇಲ್ಲಿದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಶೇ. 25 ರಷ್ಟು ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಇರುವ ಪ್ರದೇಶದ ಅಂಗನವಾಡಿ ಕೇಂದ್ರಗಳಲ್ಲಿ ಕನ್ನಡ ಭಾಷೆಯೊಂದಿಗೆ ಆಯಾ ಅಲ್ಪಸಂಖ್ಯಾತ ಸಮುದಾಯದ ಭಾಷೆ ಬಲ್ಲವರನ್ನು ಕಾರ್ಯಕರ್ತೆ / ಸಹಾಯಕಿಯ ಹುದ್ದೆಗೆ ಆಯ್ಕೆ ಮಾಡುವುದು, ಅಂಗನವಾಡಿ ಕಾರ್ಯಕರ್ತೆ / ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಿದವರಲ್ಲಿ…

Read More

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಯಾದಗಿರಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಶೋಭಾ ಯಾತ್ರೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಯಾದಗಿರಿಯಲ್ಲಿ ಸೆ.21ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಪ್ರತಾಪ್ ಸಿಂಹ, ಪ್ರಚೋದನಕಾರಿ ಭಾಷಣ ಮಾಡಿದ್ದರು. ಗಣೇಶ ಮೂರ್ತಿ ವಿಸರ್ಜನೆ ವೇಳೆ ಕಲ್ಲು ತೂರಾಟ ಪ್ರವೃತ್ತಿ ಹಲವೆಡೆ ಕಂಡುಬರುತ್ತಿದೆ. ಇಂತಹ ಪ್ರವೃತ್ತಿ ಮುಸ್ಲಿಂರಿಗೆ ಯಾಕೆ ಬರುತ್ತೆ? ಹಿಂದೂಗಳೂ ಕೈಯಲ್ಲಿ ಕಲ್ಲು ಹಿಡಿದುಕೊಂಡರೆ ನಿಮ್ಮ ಕಥೆಯೇನಾಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ…

Read More

ಅರ್ಜಿ ವಜಾ: ಹೈಕೋರ್ಟ್ ಆದೇಶದ ಬಗ್ಗೆ ಸುದೀರ್ಘ ಮಾಧ್ಯಮ ಪ್ರಕಟಣೆ ನೀಡಿದ ಸಿಎಂ

ಬೆಂಗಳೂರು: ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸಿ ಮುಂದಿನ ಹೆಜ್ಜೆ ಇಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಡಾ ಹಗರಣದ ಕುರಿತು ಹೈಕೋರ್ಟ್ ನೀಡಿರುವ ಆದೇಶದ ಬಗ್ಗೆ ಮಾಧ್ಯಮ ಪ್ರಕಟಣೆಯ ಮೂಲಕ ಪ್ರತಿಕ್ರಿಯಿಸಿದ್ದಾರೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ. ಕಾನೂನು…

Read More

CM ಸಿದ್ದರಾಮಯ್ಯ’ಗೆ ಇಂದು ನಿರ್ಣಾಯಕ ದಿನ : ರಾಜ್ಯದ ಜನರ ಚಿತ್ತ ಹೈಕೋರ್ಟ್ ತೀರ್ಪಿನತ್ತ!

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ನಂತ್ರ, ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು…

Read More

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮತ್ತೆ ಹೆಚ್ಚಲಿದೆ ಮಳೆ ಅಬ್ಬರ, ರೆಡ್ ಅಲರ್ಟ್​ ಘೋಷಣೆ!

ಬೆಂಗಳೂರು:- ಕರ್ನಾಟಕದ ಕರಾವಳಿಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ…

Read More

 ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು, ಸೆಪ್ಟಂಬರ್ 23: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕೋರ್ಟ್ ಬಿಜೆಪಿ ಶಾಸಕ ಮುನಿರತ್ನರ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟಂಬರ್ 25ಕ್ಕೆ ಮುಂದೂಡಿಕೆ ಮಾಡಿದೆ. ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಮನವಿಗೆ ಸ್ಪಂದಿಸಿದ ಬೆಂಗಳೂರಿನ ಜನಪ್ರತಿನಿಧಿಇಗಳು ವಿಶೇಷ ನ್ಯಾಯಾಲಯ ಅರ್ಜಿ ವಿಚಾರಣೆ ಮುಂದೂಡಿ ಆದೇಶಿಸಿದೆ. ಆರ್,ಆರ್ ನಗರದ ಶಾಸಕ ಮುನಿರತ್ನ ವಿರುದ್ಧ ಕೆಲವು ಗಂಭೀರ ಆರೋಪಗಳು ಕೇಳಿ ಬಂದಿವೆ. ಈ ಪೈಕಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ ಆರೋಪವು ಇತ್ತು. ಸದ್ಯ ಜೈಲಿನಲ್ಲಿರುವ ಮುನಿರತ್ನ ಜಾಮೀನು ಕೋಟಿ…

Read More

ಟ್ರಾಫಿಕ್ ರೂಲ್ಸ್ ಪಾಲಿಸದಿದ್ರೆ ಲೈಸೆನ್ಸ್ ಕ್ಯಾನ್ಸಲ್ :ಸಿದ್ದರಾಮಯ್ಯ

ಬೆಂಗಳೂರು : ರಸ್ತೆಯಲ್ಲಿ ಸಿಗ್ನಲ್ ಮೀರಿ ದಾಟಿ ಹೋಗೋದು, ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡುವುದು, ಕುಡಿದು ಬೈಕ್ ಕಾರು ಓಡಿಸುವವರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ಕೊಟ್ಟಿದ್ದಾರೆ. ಹೌದು ಇನ್ಮುಂದೆ ಸಂಚಾರ ನಿಯಮ ಪಾಲಿಸದೇ ಇರುವವರಿಗೆ ಚಾಲನಾ ಪರವಾನಗಿಯನ್ನು ರದ್ದು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಮಹತ್ವದ ಸೂಚನೆ ನೀಡಿದರು. ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ ನಿಮ್ಮ ಕುಟುಂಬಗಳನ್ನು…

Read More

ದೈವತ್ವದಿಂದ ಒತ್ತಡ ನಿಭಾಯಿಸಿ ಎಂದ ನಿರ್ಮಲಾ ಸೀತಾರಾಮನ್

ಚೆನ್ನೈ: ದೇಶಾದ್ಯಂತ ಸುದ್ದಿ ಮಾಡುತ್ತಿರುವ 26 ವರ್ಷದ ಚಾರ್ಟೆಡ್ ಅಕೌಂಟೆಂಟ್ ಸಾವು ಪ್ರಕರಣದ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೀಡಿರುವ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ. Ernst & Young ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವತಿ ಕೆಲಸದ ಒತ್ತಡದಿಂದ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಚೆನ್ನೈ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ನಿರ್ಮಲಾ ಸೀತಾರಾಮನ್, ಈ ಸಾವಿನ ಬಗ್ಗೆ ಯಾವುದೇ ಹೆಸರನ್ನು ಉಲ್ಲೇಖಿಸದೇ ಮಾತನಾಡಿದ್ದು, ಒತ್ತಡಗಳನ್ನು ನಿರ್ವಹಿಸುವ ಆಂತರಿಕ ಶಕ್ತಿಯನ್ನು ಜನರು ಗಳಿಸಿಕೊಳ್ಳಲು…

Read More

ಲೆಕ್ಕದಲ್ಲಿ ಪರ್ಫೆಕ್ಟ್ ಎಂದು ಮತ್ತೊಮ್ಮೆ ಸಾಬೀತು ಪಡಿಸಿದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮ್ಯಯ ಅಂದ್ರೆ ಪರ್ಫೆಕ್ಟ್​. ಲೆಕ್ಕ, ಅಂಕಿ-ಅಂಶದಲ್ಲಿ ಸಿಎಂ ಸಿದ್ದರಾಮಯ್ಯ ಪರ್ಫೆಕ್ಟ್​ ಎಂದು ರಾಜ್ಯ ರಾಜಕಾರಣಲ್ಲಿ ಎಲ್ಲರಿಗೂ ಗೊತ್ತಿರುವ ವಿಷಯ. ಈ ಅಂಕಿ-ಅಂಶದಲ್ಲಿ ಸಿಎಂ ಹಲವು ಬಾರಿ ತಾವು ಪರ್ಫೆಕ್ಟ್​ ಎಂದು ಸಾಬೀತು ಮಾಡಿದ್ದುಂಟು, ಅದಕ್ಕಾಗಿ ಅವರನ್ನು ಲೆಕ್ಕರಾಮಯ್ಯ ಅಂತಲೂ ಕರೆಯುತ್ತಾರೆ.ಇದೀಗ ಮತ್ತೊಮ್ಮೆ ತಮ್ಮ ಅಂಕಿ-ಅಂಶ ಪರ್ಫೆಕ್ಟ್​ ಎಂದು ಸಾಬೀತುಪಡಿಸಿದ್ದಾರೆ. ಕೊಪ್ಪಳ, (ಸೆಪ್ಟೆಂಬರ್ 22): ಕೊಪ್ಪಳ ತಾಲೂಕಿನ ಮುನಿರಾಬಾದ್ ನಲ್ಲಿ ಇಂದು ತುಂಗಭದ್ರಾ ಜಲಾಶಯ ಗೇಟ್ ದುರಸ್ತಿ ಮಾಡಿದವರಿಗೆ ಸರ್ಕಾರದಿಂದ ಸತ್ಕಾರ ಮಾಡಲಾಯಿತು. ಮುನಿರಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ…

Read More

ಲಾಡು ಎಫೆಕ್ಟ್ – ತಿರುಪತಿ ಖಾಲಿ ಖಾಲಿ

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು ಪತ್ತೆ ಬೆನ್ನಲ್ಲೇ ತಿರುಪತಿ ತಿರುಮಲ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಭಾರಿ ಇಳಿಕೆ ಆಗಿದೆ. ರಜಾ ದಿನವಾದ ಭಾನುವಾರ ಇಂದು ಭಕ್ತರ ಸಂಖ್ಯೆ ಜಾಸ್ತಿ ಇರಬೇಕಿತ್ತು. ಆದರೆ ಈ ವಿಚಾರ ಬಯಲಾಗುತ್ತಿದ್ದಂತೆ ಭಕ್ತರು ದೇವಸ್ಥಾನಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಇನ್ನು ದೇವಸ್ಥಾನದ ಲಡ್ಡು ಕೌಂಟರ್‌ ಖಾಲಿ ಹೊಡೆಯುತ್ತಿದ್ದು, ದೇವಸ್ಥಾನಕ್ಕೆ ಬಂದ ಕೆಲ ಭಕ್ತರು ದೇವರ ದರ್ಶನ ಮುಗಿಸಿ ಹಾಗೇ ವಾಪಸ್ಸಾಗುತ್ತಿದ್ದಾರೆ. ಇನ್ನು ಲಡ್ಡು ಪ್ರಸಾದ ಅಪವಿತ್ರವಾಗಿರುವ ವಿಚಾರದ ಬೆನ್ನಲ್ಲೇ ಆಂಧ್ರ ಸಿಎಂ…

Read More

ತಿರುಪತಿ ಲಡ್ಡು ವಿವಾದ: ಪವನ್​ ಕಲ್ಯಾಣ್​ಗೆ ಪ್ರಕಾಶ್ ರಾಜ್ ಟಾಂಗ್

ಅಮರಾವತಿ: ಕೋಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ತಿರುಪತಿಯ ತಿರುಮಲ ದೇಗುಲದ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಹಾಗೂ ಪ್ರಾಣಿಗಳ ಕೊಬ್ಬು ಬಳಕೆ ಆಗುತ್ತಿತ್ತೆಂಬ ವಿಚಾರ ಬೆಳಕಿಗೆ ಬಂದಿದ್ದು, ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ಅವಧಿಯಲ್ಲಿ ನಡೆದಿತ್ತೆನ್ನಲಾದ ಈ ಪ್ರಮಾದವನ್ನು ಸತ್ಯ ಎಂದು ಗುಜರಾತ್​ನ ಪ್ರಯೋಗಾಲಯ ದೃಢಪಡಿಸಿದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎಲ್ಲೆಡೆ ಚರ್ಚೆ ಜೋರಾಗಿ ನಡೆಯುತ್ತಿದೆ. ತಿರುಮಲ ಲಡ್ಡು ವಿವಾದದ ಬಗ್ಗೆ ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಆಂಧ್ರದ ಉಪ…

Read More

ಗಂಡನ ಆಸ್ತಿಯ ಮೇಲೆ ಹೆಂಡತಿಗೆ ಹಕ್ಕಿಲ್ಲ: ಹೈಕೋರ್ಟ್

ನವದೆಹಲಿ : ಗಂಡನ ಅಸ್ತಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗಂಡನ ಮರಣದ ನಂತರ ಅವನ ಆಸ್ತಿಯ ಮೇಲೆ ಹೆಂಡತಿಗೆ ಸಂಪೂರ್ಣ ಹಕ್ಕಿಲ್ಲ ಎಂದು ಹೈಕೋರ್ಟ್ ಹೇಳಿದೆ. ಗಂಡನ ಮರಣದ ನಂತರ, ಹಿಂದೂ ಮಹಿಳೆ ಅವನ ಆಸ್ತಿಯ ಲಾಭವನ್ನು ಪಡೆಯಬಹುದು, ಆದರೆ ಅವಳು ಗಂಡನ ಆಸ್ತಿಯ ಮೇಲೆ ‘ಸಂಪೂರ್ಣ ಹಕ್ಕು’ ಹೊಂದಿರುವುದಿಲ್ಲ ಎಂದು ತಿಳಿಸಿದೆ. ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್ ಅವರು, ‘ಸ್ವಂತದ ಯಾವುದೇ ಆದಾಯವಿಲ್ಲದ ಹಿಂದೂ ಮಹಿಳೆಯು ತನ್ನ ಮರಣಿಸಿದ ಗಂಡನ ಆಸ್ತಿಯನ್ನು…

Read More

ಕವಿತೆ: ವೇದಾವತಿ ನದಿಯಲ್ಲಿ ಮುಳುಗಿದ ಸೂಳೆ

ಬರಹ: ಬಿ ಟಿ ಲಲಿತಾ ನಾಯಕ್ ನಿಮ್ಮೂರ ಬಸವಿಯರ ‘ಕೊನೆಗಾಲ’ ಹೇಗೋ ನಾನರಿಯೆನಾನು ಕಂಡಿದ್ದನ್ನು ಇಲ್ಲಿ ಮಂಡಿಸುತ್ತಿದ್ದೇನೆ-ನನ್ನೂರು ಬಲು ಸಣ್ಣದು, 60 ಕ್ಕೆ ಮೀರದ ಹೆಂಚು ಸೋಗೆಅರೆಗೋಡೆ ಅರೆತಡಿಕೆಗಳ ಸಣ್ಣ ದೊಡ್ಡ ಮನೆಗಳುಅಷ್ಟು ಸನ್ನೂರೊಳಗೆ ಕಡಿಮೆಯಂದರೂ ಹಿಂದೆಹತ್ತೋ ಹನ್ನೆರಡು ಸೂಳೆಯರು!ರಾಜಾರೋಷವಾಗಿ ಹಾಡುಹಗಲುಗಳಲ್ಲೂ ಮಿಂಡರಿಗೆಮೈಸುಖ ಉಣಿಸಿ ತಣಿಸಿ,ಬೆಳೆದಿಂಗಳಲ್ಲೂ ಕೊಡೆಅರಳಿಸಿ ಓಡಾಡಿದವರು. ಪೇಟೆ ಊರುಗಳ ಮೋಜು-ಮೇಜವಾಗಿ ಸವಿದರುಊರವರ ಕೊಂಕುಮಾತು ಕುಹಕ ನಗೆಯನ್ನೆಲ್ಲಕುಂಡಿಯಿಂದ ವರೆಸಿಹಾಕಿ, ವಡವೆ-ವಸ್ತ್ರ ದುಡ್ಡು ಕಾಸುಸೀರೆ ಕುಪ್ಪುಸದ ರಾಶಿ ಪೇರಿಸಿ ರಾಣಿಯಾಗಿ ಮೆರೆದವರು. ಎಡಗೈಲಿ ಶರಾಬು ಶೀಸೆ ಬಲಗೈಲಿ…

Read More

ಬಿಜೆಪಿ ಶಾಸಕ ಮುನಿರತ್ನ ‌ಮತ್ತೆ ಬಂಧನ

ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ನ್ಯಾಯಾಂಗದ ಬಂಧನದಲ್ಲಿದ್ದು ಷರತ್ತುಬದ್ಧ ಜಾಮೀನನ ಮೇಲೆ ಬಿಡುಗಡೆಯಾದ ಬಿಜೆಪಿ ಶಾಸಕ ಮುನಿರತ್ನ ‌ಅವರನ್ನು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೊಲೀಸರು ಶುಕ್ರವಾರ ಬೆಳಿಗ್ಗೆಯೇ ಬಂಧಿಸಿದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮುನಿರತ್ನ ಅವರು ನ್ಯಾಯಾಂಗದ ಬಂಧನದಲ್ಲಿ ಇದ್ದರು.ಮುನಿರತ್ನ ಪರ ವಕೀಲರು ಜಾಮೀನು ಪ್ರತಿಯನ್ನು ಜೈಲಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು. ಎಲ್ಲ ಪ್ರಕ್ರಿಯೆ ಮುಗಿದ ಕೂಡಲೇ ಕಗ್ಗಲಿಪುರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡರು. ಮುನಿರತ್ನ ಅವರನ್ನು ವಶಕ್ಕೆ ಪಡೆಯಲು ರಾಮನಗರ ಪೊಲೀಸರು ಗುರುವಾರ ರಾತ್ರಿಯಿಂದಲೂ ಜೈಲು…

Read More

ಮುಸ್ಲಿಮ್ ಸಮುದಾಯ ಕುರಿತ ನ್ಯಾಯಾಧೀಶರ ಹೇಳಿಕೆಗೆ ವ್ಯಾಪಕ ಆಕ್ರೋಶ

ಬೆಂಗಳೂರು: ‘ಬೆಂಗಳೂರು ನಗರದ ಮುಸ್ಲಿಮ್ ಸಮುದಾಯ ಹೆಚ್ಚಾಗಿ ವಾಸ ಮಾಡುವ ಸ್ಥಳವನ್ನು ‘ಭಾರತವಲ್ಲ, ಪಾಕಿಸ್ತಾನ’ ಎಂದು ಹೈಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರು ಹೇಳಿರುವುದು ನಮಗೆ ಆಘಾತ ಉಂಟುಮಾಡಿದೆ’ ಎಂದು ಸಾಹಿತಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ‘ಜಾಗೃತ ನಾಗರಿಕರು ಕರ್ನಾಟಕ’ ಸಂಘಟನೆ ಹೆಸರಿನಲ್ಲಿ ಹಿರಿಯ ಸಾಹಿತಿಗಳಾದ ಪ್ರೊ.ಕೆ.ಮರುಳಸಿದ್ಧಪ್ಪ, ಡಾ.ಜಿ.ರಾಮಕೃಷ್ಣ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ರುದ್ರಪ್ಪ ಹನಗವಾಡಿ, ಬಿ. ಶ್ರೀಪಾದ ಭಟ್, ಡಾ.ಮೀನಾಕ್ಷಿ ಬಾಳಿ, ಕೆ. ಎಸ್. ವಿಮಲ ಸೇರಿ ಮತ್ತಿತರ ಸಾಹಿತಿಗಳು ಪ್ರಗತಿಪರರು ಪ್ರಕಟನೆ ಹೊರಡಿಸಿದ್ದಾರೆ. ಸರ್ವಧರ್ಮ ಸಮಭಾವದ ಸಂವಿಧಾನವನ್ನು…

Read More