Munnudi News

ಕಸ್ತೂರಿ ರಂಗನ್ ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

ಬೆಂಗಳೂರು: ಕಸ್ತೂರಿ ರಂಗನ್‌ ವರದಿ ಜಾರಿಗೊಳಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ ಸಭೆಯಲ್ಲಿ ಆಕ್ರೋಶ ಭರಿತರಾಗಿ ಮಾತನಾಡಿದರು ಎಂದು ತಿಳಿದು ಬಂದಿದೆ. ಕಸ್ತೂರಿ ರಂಗನ್‌ ವರದಿ ಅವೈಜ್ಞಾನಿಕವಾಗಿದ್ದು, ಜಾರಿಯಾದರೆ ಪಶ್ಚಿಮಘಟ್ಟದ ಜನಜೀವನ ಅಸ್ತವ್ಯಸ್ತವಾಗುತ್ತದೆ. ಜನಪ್ರತಿನಿಧಿಗಳಿಗೆ ಮತದಾರರನ್ನು ಎದುರಿಸುವುದಕ್ಕೆ ಕಷ್ಟವಾಗುತ್ತದೆ. ಒಂದೊಮ್ಮೆ ವರದಿ ಜಾರಿ ಮಾಡುವುದಕ್ಕೆ ಸರಕಾರ ನಿರ್ಧರಿಸಿದರೆ ತಾನು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ವರದಿ ಸಂಬಂಧ ಕರೆದಿದ್ದ ಜನಪ್ರತಿನಿಧಿಗಳ ಸಭೆಯಲ್ಲಿ ಎಚ್ಚರಿಕೆ…

Read More

ಪ್ಯಾಲೇಸ್ತೀನ್ ಧ್ವಜ ಹಿಡಿದರೆ ತಪ್ಪೇನು.? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಕಲಬುರಗಿ: ಕೇಂದ್ರ ಸರ್ಕಾರವೇ ಪ್ಯಾಲೇಸ್ತೀನ್ ಗೆ ಬೆಂಬಲ ನೀಡಿದೆ. ಹೀಗಿರುವಾಗ ಪ್ಯಾಲೇಸ್ತೀನ್ ಧ್ವಜ ಹಿಡಿದರೆ ತಪ್ಪೇನು ಎಂದು ವಸತಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ.ರಾಜ್ಯದ ಅನೇಕ ಕಡೆ ಪ್ಯಾಲೇಸ್ತೀನ್ ದ್ವಜ ಹಾರಾಟ ವಿಚಾರದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರವೇ ವಿ ಆರ್ ವಿತ್ ಪ್ಯಾಲೇಸ್ತೀನ್ ಎಂದು ಹೇಳಿದೆ.ಕೇಂದ್ರ ಹೇಳಿದ ಮೇಲೆ ತಾನೇ ಯಾರ ಧ್ವಜ ಹಿಡಿದಿದ್ದು, ಧ್ವಜ ಹಿಡಿದರೆ ತಪ್ಪೇನು ಇಲ್ಲ ಅನಿಸುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಬೇರೆ ದೇಶದ ಪರ ಘೋಷಣೆ ಕೂಗಿದರೆ ಅಂಥವರು…

Read More

ವೃತ್ತಿ ಶಿಕ್ಷಣ:-ಖಾಸಗಿ ಕಾಲೇಜು ಪ್ರವೇಶ ಪರೀಕ್ಷೆಗೆ ನಿರ್ಬಂಧ

ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕಾಗಿ ಖಾಸಗಿ ವಿಶ್ವವಿದ್ಯಾಲಯಗಳು ನಡೆಸುತ್ತಿದ್ದ ಪ್ರವೇಶ ಪರೀಕ್ಷೆಗೆ ರಾಜ್ಯ ಸರ್ಕಾರವು ಕಡಿವಾಣ ಹಾಕಿದೆ. ಈಗಾಗಲೇ ವಿವಿಧ ಪ್ರಾಧಿಕಾರಗಳು ನಡೆಸುತ್ತಿರುವ ಪ್ರವೇಶ ಪರೀಕ್ಷೆಗಳಲ್ಲಿಯೇ ಒಂದನ್ನು ಆಯ್ಕೆ ಮಾಡಿಕೊಂಡು ಪ್ರವೇಶ ಕಲ್ಪಿಸುವಂತೆ ಸೂಚನೆ ನೀಡಿದ್ದು, ಇದಕ್ಕೆ ರಾಜ್ಯದ 17 ವಿಶ್ವವಿದ್ಯಾಲಯಗಳು ಒಪ್ಪಿಗೆ ಸೂಚಿಸಿವೆ. ಹಿಂದಿನ ಸರ್ಕಾರದ ಅವಧಿಯಲ್ಲಿಯೂ ಏಕರೂಪದ ಪ್ರವೇಶ ಪ್ರಕ್ರಿಯೆ ನಡೆಸಲು ಸಾಕಷ್ಟು ಪ್ರಯತ್ನಿಸಲಾಗಿದ್ದರೂ ಒಮ್ಮತ ನಿರ್ಧಾರವಾಗಿರಲಿಲ್ಲ. ಆದರೆ, ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಗುರುವಾರ ನಡೆದ ಸಭೆಯಲ್ಲಿ ಖಾಸಗಿ ವಿವಿಗಳಲ್ಲಿ…

Read More

ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್:ವೇತನ ಸಹಿತ ‘ಮುಟ್ಟಿನ ರಜೆ’ ನೀಡಲು ಕರ್ನಾಟಕ ಸರ್ಕಾರ ತೀರ್ಮಾನ

ಬೆಂಗಳೂರು: ಕರ್ನಾಟಕವು ಮಹಿಳೆಯರಿಗೆ ವರ್ಷಕ್ಕೆ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪಡೆಯಲು ಅರ್ಹವಾದ ನೀತಿಯನ್ನು ಅಂತಿಮಗೊಳಿಸುತ್ತಿದೆ, ಈ ಕ್ರಮವು ಲಕ್ಷಾಂತರ ಉದ್ಯೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಈ ಯೋಜನೆ ಜಾರಿಯಾದರೆ ಬಿಹಾರ, ಕೇರಳ ಮತ್ತು ಒಡಿಶಾದ ನಂತರ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ನಾಲ್ಕನೇ ರಾಜ್ಯ ಕರ್ನಾಟಕವಾಗಲಿದೆ. ಈ ಕುರಿತು ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ‘ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕಿ ಸಪ್ನಾ ಎಸ್ ನೇತೃತ್ವದ 18 ಸದಸ್ಯರ ಸಮಿತಿ ವರದಿ ಸಲ್ಲಿಸಿದೆ.” ಎಂದರು….

Read More

ವಾಲ್ಮೀಕಿ ನಿಗಮ ಹಗರಣ : ಇಂದು ಬಿ.ನಾಗೇಂದ್ರ ಭವಿಷ್ಯ ನಿರ್ಧಾರ!

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇಂದು ಶಾಸಕ ಬಿ ನಾಗೇಂದ್ರ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿ ನಾಗೇಂದ್ರ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈ ಪ್ರಕರಣದಲ್ಲಿ…

Read More

ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿ ಕೊಬ್ಬು ಬಳಕೆ ಆರೋಪ: ತುಪ್ಪದ ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ

ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ತನಿಖಾ ವರದಿಯಲ್ಲೂ ಇದು ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷೆ ಮಾಡಲು ಸಮಿತಿಯೊಂದನ್ನು ಟಿಟಿಡಿ ಸ್ಥಾಪಿಸಿದೆ. ನಾಲ್ಕು ತಜ್ಞರನ್ನು ಈ ಸಮಿತಿ ಒಳಗೊಂಡಿದೆ. ಡಾ. ಸ್ವರ್ಣಲತಾ, ಡಾ. ವಿಜಯ್ ಭಾಸ್ಕರ್ ರೆಡ್ಡಿ, ಡಾ.ಮಹದೇವನ್ ಹಾಗೂ ಡಾ. ಸುರೇಂದ್ರನಾಥ್ ಅವರನ್ನೊಳಗೊಂಡಂತೆ ಸಮಿತಿಯನ್ನು ರಚಿಸಲಾಗಿದ್ದು ಇವರು ತುಪ್ಪದ ಗುಣಮಟ್ಟವನ್ನು ಪರಿಶೀಲನೆ ನಡೆಸಲಿದ್ದಾರೆ. ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆ…

Read More

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿಧಿವಶ

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ಗುರುವಾರ(ಸೆ19) ನಿಧನ ಹೊಂದಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಅವರು ಹೊಸಕೋಟೆಯನಿವಾಸದಲ್ಲಿ ನಿಧನ ಹೊಂದಿದ್ದಾರೆ. ಎರಡು ದಿನಗಳ ಹಿಂದೆ ಖಾಸಗಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು ಎಂದು ತಿಳಿದು ಬಂದಿದೆ. ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ಅವಧಿಯಲ್ಲಿ ಸರಕಾರದ ವಿರುದ್ಧ ಕೆಂಪಣ್ಣ ಅವರು 40% ಕಮಿಷನ್‌ ಆರೋಪ ಮಾಡಿ ಭಾರೀ ಸುದ್ದಿಯಾಗಿದ್ದರು. ಈ ವಿಚಾರ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿ ಮಾಡಿತ್ತು. ಕಾಂಗ್ರೆಸ್ ಆರೋಪವನ್ನೇ ದೊಡ್ಡ ಅಸ್ತ್ರ…

Read More

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅವಧಿ ವಿಸ್ತರಣೆ

ಬೆಂಗಳೂರು : ಸರಕಾರದ ಆದೇಶದನ್ವಯ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ (HSRP Number Plate) ಅಳವಡಿಕೆಯ ಕಾರ್ಯ ನಡೆಯುತ್ತಿದೆ. ರಾಜ್ಯ ಸರಕಾರ ಈಗಾಗಲೇ ಹಲವು ಬಾರಿ ಡೆಡ್‌ಲೈನ್‌ ನೀಡಿದ್ದರೂ ಇದುವರೆಗೂ ಬಹುತೇಕರು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸಿಲ್ಲ.ವಾಹನಗಳ ಸುರಕ್ಷತೆಯ ದೃಷ್ಟಿಯಿಂದ ರಾಜ್ಯ ಸಾರಿಗೆ ಇಲಾಖೆ ರಾಜ್ಯದಲ್ಲಿನ ಎಲ್ಲಾ ದ್ವಿಚಕ್ರ, ಮೂರು ಚಕ್ರ, ನಾಲ್ಕು ಚಕ್ರ ಸೇರಿದಂತೆ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌(High Security Registration Plate (HSRP) ಅಳವಡಿಕೆ ಮಾಡುವಂತೆ ಕಡ್ಡಾಯ ಆದೇಶ ಹೊರಡಿಸಿತ್ತು. ರಾಜ್ಯ…

Read More

`BSF’ ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ : ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ!

ಬೆಂಗಳೂರು : ಸೇನೆ ಸೇರಬಯಸುವವರಿಗೆ ಎಸ್ ಎಸ್ ಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಸ್‌ಎಸ್‌ಸಿ ಕಾನ್ಸ್‌ಟೇಬಲ್ ನೇಮಕಾತಿ ಅಡಿಯಲ್ಲಿ ಬಿಎಸ್‌ಎಫ್ (ಗಡಿ ಭದ್ರತಾ ಪಡೆ) ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಪುರುಷರಿಗೆ 13 ಸಾವಿರದ 306 ಮತ್ತು ಮಹಿಳೆಯರಿಗೆ 2348 ಹುದ್ದೆಗಳು ಸೇರಿವೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 14 ರವರೆಗೆ ಅವಕಾಶವಿದೆ. ಆದ್ದರಿಂದ ಅದಕ್ಕೂ ಮೊದಲು ನೀವು ಈ ನೇಮಕಾತಿಗಳಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಪ್ರಕ್ರಿಯೆಯ ನಂತರ, ಈ…

Read More

ಖಾಸಗಿ ರೆಸಾರ್ಟ್‌ ನಲ್ಲಿ ಅತ್ಯಾಚಾರ; ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ ದೂರು

ಬೆಂಗಳೂರು, ಸೆಪ್ಟೆಂಬರ್‌ 19: ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಹಲವು ಪ್ರಕರಣಗಳು ತಡವಾಗಿ ಬೆಳಕಿಗೆ ಬರುತ್ತಿದ್ದು, ಇದೀಗ ಅತ್ಯಾಚಾರ ಕುರಿತು ದೂರು ದಾಖಲಿಸಿದ್ದಾರೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್‌ನಲ್ಲಿ ಮುನಿರತ್ನ ಅವರ ವಿರುದ್ಧ ಒಕ್ಕಲಿಗ, ದಲಿತ ಸಂಘಟನೆಗಳು ಸರಣಿ ಪ್ರತಿಭಟನೆ ಮಾಡ್ತಿವೆ. ಕಾಂಗ್ರೆಸ್‌ಗೆ ಈ ಪ್ರಕರಣವೇ ದೊಡ್ಡ ಅಸ್ತ್ರವಾಗಿ ಸಿಕ್ಕಿದ್ದು, ಇದೀಗ…

Read More

ಕಲ್ಯಾಣ ಕರ್ನಾಟಕದ ಭಾಗದ ಅಭಿವೃದ್ಧಿಗೆ 11770 ಕೋಟಿ ರೂ ಯೋಜನೆಗಳಿಗೆ ಅನುಮೋದನೆ: ಸಿಎಂ ಸಿದ್ಧರಾಮಯ್ಯ

ಕಲಬುರಗಿ : ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಯಾಗಿ ಮಾಡುವ ಹಾಗೂ ಬೀದರ್ ಮತ್ತು ಕಲಬುರಗಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯನ್ನು 7200 ಕೋಟಿ ರೂಗಳ ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ…

Read More

ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ ಉತ್ಸವ’ದ ಧ್ವಜಾರೋಹಣ ನೆರವೇರಿಸಿದ CM ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಇಂದು ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ ಉತ್ಸವ’ದ ಧ್ವಜಾರೋಹಣ ನೆರವೇರಿಸಿದರು. 76 ನೇ ಕರ್ನಾಟಕ ಕಲ್ಯಾಣ ಉತ್ಸವ ದಿನಾಚರಣೆ 2024 ರ ಪ್ರಯುಕ್ತ ಸಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಭೈರತಿ ಸುರೇಶ್, ಹೆಚ್.ಕೆ ಪಾಟೀಲ್, ಡಿ ಸುಧಾಕರ್ ಮತ್ತಿತರರಿದ್ದರು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ…

Read More

ಹೈದರಾಬಾದ್ ಕರ್ನಾಟಕ: ಇತಿಹಾಸ, ಸಂಸ್ಕೃತಿ ಮತ್ತು ಅಭಿವೃದ್ಧಿಯ ಪಯಣ

ಹೈದರಾಬಾದ್ ಕರ್ನಾಟಕ ಪ್ರದೇಶವು ಭಾರತದ ದಕ್ಷಿಣ ಭಾಗದಲ್ಲಿರುವ ಕರ್ನಾಟಕ ರಾಜ್ಯದ ಒಂದು ಪ್ರಮುಖ ಭಾಗವಾಗಿದೆ. ಇತಿಹಾಸದ ಪ್ರಕಾರ, ಈ ಪ್ರದೇಶವು ಹೈದರಾಬಾದ್ ನಿಜಾಮರ ಆಡಳಿತದ ಅಡಿಯಲ್ಲಿ ಇದ್ದುದರಿಂದ ಈ ಪ್ರದೇಶಕ್ಕೆ “ಹೈದರಾಬಾದ್ ಕರ್ನಾಟಕ” ಎಂದು ಹೆಸರು ಬಂದಿದೆ. 1956ರ ಕರ್ನಾಟಕ ಮರುಹೊಂದಿಸುವ ಇತಿಹಾಸಾತ್ಮಕ ಪ್ರಕ್ರಿಯೆಯಲ್ಲಿ ಈ ಪ್ರದೇಶವು ಕರ್ನಾಟಕಕ್ಕೆ ಸೇರ್ಪಡೆಯಾಯಿತು. ಭೂಗೋಳಿಕ ಸ್ಥಾನಮಾನ ಮತ್ತು ಜಿಲ್ಲೆಗಳು: ಹೈದರಾಬಾದ್ ಕರ್ನಾಟಕವು ಬಳ್ಳಾರಿ, ಬೀದರ, ಕಲಬುರ್ಗಿ, koppala(ಕೊಪ್ಪಳ), ಯಾದಗಿರಿ, ಮತ್ತು ರಾಯಚೂರು ಜಿಲ್ಲೆಗಳನ್ನು ಒಳಗೊಂಡಿದೆ. ಈ ಪ್ರದೇಶವು ತನ್ನ ವಿಶಿಷ್ಟ…

Read More

HSRP ನಂಬರ್‌ ಪ್ಲೇಟ್‌: 3 ದಿನ ದಂಡ ವಿಧಿಸದಿರಲು ಸಾರಿಗೆ ಇಲಾಖೆ ನಿರ್ಧಾರ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸುವ ಅಂತಿಮ ಗಡುವು ಭಾನುವಾರಕ್ಕೆ ಮುಕ್ತಾಯವಾಗಿದ್ದು, ಈ ನಡುವೆ ಸೆ.18ರವರೆಗೂ ಕಠಿಣ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸಾರಿಗೆ ಇಲಾಖೆ ಸೂಚನೆ ನೀಡಿದೆ. ಸಾರಿಗೆ ಇಲಾಖೆ ಸೂಚನೆ ಹಿನ್ನೆಲೆಯಲ್ಲಿ ಇಂದು ಕೂಡ ನೋಂದಣಿಗೆ ಅವಕಾಶ ಇದ್ದು, ನೋಂದಣಿ ಮಾಡಿಸಿಕೊಳ್ಳದವರಿಗೆ ನೋಂದಣಿ ಮಾಡಿಸಿಕೊಳ್ಳುವ ಅವಕಾಶ ಸಿಕ್ಕಂತಾಗಿದೆ. ಸೆಪ್ಟೆಂಬರ್ 18ರಂದು ಎಚ್‌ಎಸ್‌ಆರ್‌ಪಿ ಅಳವಡಿಕೆ ಸಂಬಂಧಿಸಿದ ಅರ್ಜಿ ವಿಚಾರಣೆಗೆ ಹೈಕೋರ್ಟ್ ನಲ್ಲಿ ಬರಲಿದೆ. ಹೀಗಾಗಿ, ಅಲ್ಲಿಯವರೆಗೆ ವಾಹನ ಮಾಲೀಕರ ವಿರುದ್ಧ ಬಲವಂತದ ಕ್ರಮ…

Read More

ಕರ್ನಾಟಕದಾದ್ಯಂತ ಇಂದು ಮಳೆಯ ಅರ್ಭಟ

 ಸೆಪ್ಟೆಂಬರ್ 16: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಸಾಧಾರಣ ಮಳೆಯಾಗುತ್ತಿದೆ. ರಾಜದಾದ್ಯಂತ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು ಮಳೆಯ ಪ್ರಮಾಣ ತೀರಾ ಕಡಿಮೆಯಾಗಿದೆ. ಇಂದು ಕೂಡ ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಸೂಚನೆ ನೀಡಿದೆ. ಇಂದು (ಸೆ.16) ದಕ್ಷಿಣ ಕನ್ನ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳಲಿದೆ. ಕೊಡಗು, ಹಾಸನ, ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳಲ್ಲೂ ಮಳೆ ಪ್ರಮಾಣ ಕಡಿಮೆ ಇರಲಿದೆ. ಮಲೆನಾಡಿನಲ್ಲಿ…

Read More

ತುಮಕೂರು : ಗಣೇಶ ವಿಸರ್ಜನೆಯ ವೇಳೆ ನೀರಲ್ಲಿ ಮುಳುಗಿ ಮೂವರ ಸಾವು

ತುಮಕೂರು : ಗಣೇಶ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಯ ವಿಸರ್ಜನೆ ವೇಳೆ ಎಷ್ಟೇ ಎಚ್ಚರಿಕೆಯಿಂದ ಇದ್ದರೂ ಕೂಡ ದುರಂತಗಳು ಸಂಭವಿಸುತ್ತವೆ. ಇದೀಗ ಇಂತಹದ್ದೇ ಘಟನೆ ತುಮಕೂರಿನಲ್ಲಿ ನಡೆದಿದ್ದು, ಭಾನುವಾರದಂದು ಗಣೇಶ ಮೂರ್ತಿ ವಿಸರ್ಜನೆಯ ವೇಳೆ ತಂದೆ ಮಗ ಸೇರಿದಂತೆ ಒಟ್ಟು ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಗಣೇಶ ವಿಸರ್ಜನೆ ವೇಳೆ ತಂದೆ ಮಗ ಸೇರಿ ಮೂವರ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನ ಹಟ್ಟಿ ಕೆರೆಯಲ್ಲಿ ಈ ದುರ್ಘಟನೆ…

Read More

ಶಾಸಕ ಮುನಿರತ್ನ ಪೊಲೀಸ್ ಕಸ್ಟಡಿ ಅಂತ್ಯ . ಮುಂದೇನು?

ಬೆಂಗಳೂರು: ಗುತ್ತಿಗೆದಾರನಿಗೆ (Contractor) ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ರಾಜರಾಜೇಶ್ವರಿನಗರದ (Rajarajeshwari Nagar) ಬಿಜೆಪಿ ಶಾಸಕ ಮುನಿರತ್ನ (MLA Munirathna) ಅವರ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದೆ. ಹೀಗಾಗಿ ಪೊಲೀಸರು ಪ್ರಕರಣದ ಕುರಿತು ತನಿಖೆಯನ್ನು ಚುರುಕುಗೊಳಿಸಲಿದ್ದಾರೆ ಎನ್ನಲಾಗಿದೆ. ಇಂದು ಪೊಲೀಸರಿಂದ ತನಿಖೆ :ಇಂದು ಮುನಿರತ್ನರನ್ನ ಕರೆದೊಯ್ದು ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ. ಇದಾದ ಬಳಿಕ ಮುನಿರತ್ನ ಅವರ ವಾಯ್ಸ್ ಸ್ಯಾಂಪಲ್ ಅನ್ನು ಪೊಲೀಸರು ಸಂಗ್ರಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ವಾಯ್ಸ್ ಸ್ಯಾಂಪಲ್…

Read More

ಕೆಎಸ್ಸಾರ್ಟಿಸಿ ನಿಲ್ದಾಣಗಳಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್‌!

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಸಾರ್ಟಿಸಿ)ದ ಆಯ್ದ ಬಸ್‌ ನಿಲ್ದಾಣಗಳಲ್ಲಿ ಪ್ರಯಾಣಿಕರ ಹಾಗೂ ಬಸ್‌ ಚಾಲಕ, ನಿರ್ವಾಹಕರ ಆರೋಗ್ಯದ ದೃಷ್ಟಿಯಿಂದ “ನಮ್ಮ ಕ್ಲಿನಿಕ್‌’ಗಳನ್ನು ಶೀಘ್ರವೇ ತೆರೆಯಲು ರಾಜ್ಯ ಸರಕಾರವು ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ ಹಿಂದಿನ ಸರಕಾರ ನಗರ ಭಾಗದಲ್ಲಿ “ನಮ್ಮ ಕ್ಲಿನಿಕ್‌’ಗಳನ್ನು ತೆರೆದಿದ್ದು, ಅವು ಯಶಸ್ವಿ ಯಾಗಿ ಕಾರ್ಯನಿರ್ವಹಿಸುತ್ತಿವೆ. ತಾಲೂಕು, ಜಿಲ್ಲಾಸ್ಪತ್ರೆಗಳ ಮೇಲಿನ ಒತ್ತಡವನ್ನು ಅವು ಕಡಿಮೆ ಮಾಡಿವೆ. ಹೀಗಾಗಿ ರಾಜ್ಯಾದ್ಯಂತ ಇನ್ನಷ್ಟು ಕ್ಲಿನಿಕ್‌ಗಳನ್ನು ಆರಂಭಿಸಲು ನಿರ್ಧರಿಸಿ, ಪ್ರತೀ ಜಿಲ್ಲೆಗೆ ಹೆಚ್ಚುವರಿಯಾಗಿ ಮಂಜೂರು ಮಾಡಲಾಗಿದೆ. ಕೆಎಸ್ಸಾರ್ಟಿಸಿ ಬಸ್‌…

Read More

ಟ್ರಂಪ್‌ ಹತ್ಯೆಗೆ ಮತ್ತೊಂದು ವಿಫಲ ಯತ್ನ, ಗುಂಡು ಹಾರಿಸಿದ ವ್ಯಕ್ತಿ ಅರೆಸ್ಟ್

ಫ್ಲೋರಿಡಾ,ಸೆ.16-ಇಲ್ಲಿನ ವೆಸ್ಟ್‌ ಪಾಮ್‌ ಬೀಚ್‌ನಲ್ಲಿರುವ ಗಾಲ್ಫ್ ಕ್ಲಬ್‌ನಲ್ಲಿ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್‌ ಮೇಲೆ ಗುಂಡು ಹಾರಿಸಿ ಹತ್ಯೆಗೆ ಪ್ರಯತ್ನಿಸಲಾಗಿದೆ. ಅಮೆರಿಕ ಮಾಜಿ ಅಧ್ಯಕ್ಷರು ಮತ್ತೆ ಫ್ಲೋರಿಡಾದಲ್ಲಿ ದಾಳಿಗೆ ಒಳಗಾಗಿದ್ದಾರೆ ಎಂದು ಎಫ್‌ಬಿಐ ತಿಳಿಸಿದೆ.ಒಂಬತ್ತು ವಾರಗಳ ಹಿಂದೆ ಡೊನಾಲ್ಡ್ ಟ್ರಂಪ್‌ ಅವರ ಮೇಲೆ ದಾಳಿ ನಡೆದಿತ್ತು. ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದರು. ಇದೀಗ ಮತ್ತೊಮ್ಮೆ ಅದೇ ರೀತಿ ಅವರು ಪಾರಾಗಿದ್ದು , ಸುರಕ್ಷಿತವಾಗಿ ಆರೋಗ್ಯವಾಗಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಂಬಂಧ…

Read More

ಕೇಜ್ರಿವಾಲ್ ಬಂಧನ ಪ್ರಕರಣ: ಸಿಬಿಐಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನದ ‘ಅಗತ್ಯ’ ಹಾಗೂ ಬಂಧನದ ‘ಸಮಯ’ದ (ಲೋಕಸಭಾ ಚುನಾವಣೆಗೆ ಮುನ್ನ) ಕುರಿತು ಕೇಂದ್ರೀಯ ತನಿಖಾ ಸಂಸ್ಥೆಗೆ (ಸಿಬಿಐ) ಛೀಮಾರಿ ಹಾಕಿರುವ ಸುಪ್ರೀಂ ಕೋರ್ಟ್‌, ‘ತನಿಖಾ ಸಂಸ್ಥೆಯು ಪಂಜರದ ಗಿಳಿಯಾಗಬಾರದು’ ಎಂದು ಕಟುವಾಗಿ ಹೇಳಿದೆ. ಕೇಜ್ರಿವಾಲ್‌ ಸಲ್ಲಿಸಿರುವ ಜಾಮೀನು ಅರ್ಜಿ ಮತ್ತು ಸಿಬಿಐ ತಮ್ಮನ್ನು ಬಂಧಿಸಿರುವ ಕ್ರಮ ಪ್ರಶ್ನಿಸಿ ಅವರು ಸಲ್ಲಿಸಿದ ಇನ್ನೊಂದು ಅರ್ಜಿಯ ಸಂಬಂಧ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಹಾಗೂ ಉಜ್ಜಲ್‌ ಭುಯಾನ್ ಅವರಿದ್ದ ಪೀಠ ಶುಕ್ರವಾರ…

Read More

US Election: ಬಾಹ್ಯಾಕಾಶದಿಂದಲೇ ಮತ ಚಲಾಯಿಸಲಿದ್ದಾರಂತೆ ಸುನೀತಾ ವಿಲಿಯಮ್ಸ್

ವಾಷಿಂಗ್ಟನ್: ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಬಾಹ್ಯಾಕಾಶದಿಂದಲೇ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರಂತೆ. ಶುಕ್ರವಾರ ತಡರಾತ್ರಿ ಬಾಹ್ಯಾಕಾಶದಿಂದಲೇ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸುವ ವೇಳೆ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಕುರಿತು ಕೇಳಿದ ಪ್ರಶ್ನೆಗೆ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರು ಈ ಉತ್ತರ ನೀಡಿದ್ದಾರೆ ಎನ್ನಲಾಗಿದೆ, ಸುದ್ದಿಗೋಷ್ಠಿಯಲ್ಲಿ ಅಲ್ಲಿನ ಕಾರ್ಯಾಚರಣೆಯ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ ಜೊತೆಗೆ ಬಾಹ್ಯಾಕಾಶದಿಂದಲೇ ಮೊದಲ ಬಾರಿಗೆ ಮತದಾನ ಮಾಡಲು ತುಂಬಾ ಉತ್ಸುಕಳಾಗಿದ್ದೇನೆ…

Read More

ಗ್ಯಾರಂಟಿ’ ಮೂಲಕ ರಾಜ್ಯದ 1.20 ಲಕ್ಷ ಕುಟುಂಬಗಳಿಗೆ ಪ್ರತಿ ವರ್ಷ 60 ಸಾವಿರ ರೂ.ವರೆಗೆ ಆರ್ಥಿಕ ಸಹಾಯ : CM ಸಿದ್ದರಾಮಯ್ಯ

ರಾಮನಗರ : ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Read More

ವೈದ್ಯರ ಮುಷ್ಕರದಿಂದ ಮೃತಪಟ್ಟ 29 ಜನರ ಕುಟುಂಬಗಳಿಗೆ 2 ಲಕ್ಷ ಪರಿಹಾರ : ಮಮತಾ ಬ್ಯಾನರ್ಜಿ

ಕೊಲ್ಕತ್ತಾ: ಪ್ರತಿಭಟನಾನಿರತ ಕಿರಿಯ ವೈದ್ಯರ ‘ಕೆಲಸ ನಿಲ್ಲಿಸುವಿಕೆ’ಯಿಂದಾಗಿ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ 29 ಜನರ ಕುಟುಂಬಗಳಿಗೆ ರಾಜ್ಯ ಸರ್ಕಾರವು ತಲಾ ಎರಡು ಲಕ್ಷ ರೂ.ಗಳ ಪರಿಹಾರವನ್ನು ನೀಡಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಪ್ರಕಟಿಸಿದ್ದಾರೆ. ಬ್ಯಾನರ್ಜಿ ಎಕ್ಸ್’ನಲ್ಲಿ “ಕಿರಿಯ ವೈದ್ಯರ ದೀರ್ಘಕಾಲದ ಕೆಲಸವನ್ನು ನಿಲ್ಲಿಸಿದ್ದರಿಂದ ಆರೋಗ್ಯ ಸೇವೆಗಳಲ್ಲಿನ ಅಡಚಣೆಯಿಂದಾಗಿ ನಾವು 29 ಅಮೂಲ್ಯ ಜೀವಗಳನ್ನ ಕಳೆದುಕೊಂಡಿರುವುದು ದುಃಖಕರ ಮತ್ತು ದುರದೃಷ್ಟಕರ” ಎಂದು ಪೋಸ್ಟ್ ಮಾಡಿದ್ದಾರೆ.ದುಃಖಿತ ಕುಟುಂಬಗಳಿಗೆ ಸಹಾಯ ಹಸ್ತವನ್ನು ಚಾಚುವ ಸಲುವಾಗಿ, ರಾಜ್ಯ…

Read More

Breaking: KPSC ಪರೀಕ್ಷೆ ದಿಢೀರ್‌ ಮುಂದೂಡಿಕೆ

ಕರ್ನಾಟಕ ಲೋಕಸೇವಾ ಆಯೋಗವು (KPSC) ಪರೀಕ್ಷಾರ್ಥಿಗಳಿಗೆ ಶಾಕ್‌ ನೀಡಿದೆ. ನಾಳೆ ನಡೆಯಬೇಕಿದ್ದ ಗ್ರೂಪ್ ಬಿ ಪರೀಕ್ಷೆಗಳನ್ನು ಮುಂದೂಡಿ ಕೊನೆಯ ಕ್ಷಣದಲ್ಲಿ ಅಭ್ಯರ್ಥಿಗಳಿಗೆ ನಿರಾಸೆ ಮೂಡಿಸಿದೆ.ರಾಜ್ಯ ಸರ್ಕಾರವು ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ನೀಡಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿ ಅನ್ವಯವಾಗುವಂತೆ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ನಾಳೆಯಿಂದ ನಡೆಯಬೇಕಿದ್ದ ಕೆಪಿಎಸ್‌ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿರುವುದಾಗಿ ತಿಳಿಸಿದೆ.ಸರ್ಕಾರದ ಹೊಸ ಆದೇಶದಿಂದ ಎಲ್ಲ ಹುದ್ದೆಗಳಿಗೂ ವಯೋಮಿತಿಯ ಸಡಿಲಿಕೆಯು ಅನ್ವಯವಾಗಲಿದೆ. ಹಾಗಾಗಿ ನಾಳೆ ನಡೆಯಬೇಕಿದ್ದ ಕಡ್ಡಾಯ ಕನ್ನಡ…

Read More

ಹಿಂಸಾಚಾರದಿಂದ ಬೀದಿಗೆ ಬಿದ್ದ ನಾಗಮಂಗಲದ ವ್ಯಾಪಾರಿಗಳ ಬದುಕು

ಮಂಡ್ಯ,ಸೆ.13- ನಾಗಮಂಗಲ ಪಟ್ಟಣದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಗಲಭೆಯಿಂದಾಗಿ ವ್ಯಾಪಾರಿಗಳ ಬದುಕು ಬೀದಿಗೆ ಬಿದ್ದಿದೆ. ನಾಗಮಂಗಲ ಪಟ್ಟಣದಲ್ಲಿನ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದ್ದು, ಈ ಭಾಗದ ಜನರ ನೆಮದಿ ಕಸಿದಂತಾಗಿದೆ. ವ್ಯಾಪಾರಿ ಮುಜೀಬ್‌ ಎಂಬುವರು ಬ್ಯಾಂಕಿನಿಂದ ಸಾಲ ಪಡೆದು ಪಾತ್ರೆ ಅಂಗಡಿ ಇಟ್ಟುಕೊಂಡಿದ್ದು, 25 ಲಕ್ಷ ಸಾಲದ ಹೊರೆ ಅವರ ಮೇಲಿದೆ. ಕಿಡಿಗೇಡಿಗಳ ಕೃತ್ಯದಿಂದಾಗಿ ಅಂಗಡಿಗೆ ಹಾನಿಯಾಗಿದೆ. ಬ್ಯಾಂಕ್‌ನ ಸಾಲ ತೀರಿಸುವುದಾದರೂ ಹೇಗೆ ಎಂದು ಅವರು ಕಣ್ಣಿರು ಹಾಕಿದ್ದಾರೆ. ಸೌಹಾರ್ದದ ಪ್ರತೀಕವಾಗಿರುವ ಗಣೇಶ ಹಬ್ಬದಲ್ಲಿ ಮುಸ್ಲಿಂ ಬಾಂಧವರು…

Read More