ಸ್ಪಿನ್ ಮಾಂತ್ರಿಕ ಮುರಳೀಧರನ್ ದಾಖಲೆ ಸರಿಗಟ್ಟಿದ ಅಶ್ವಿನ್
ಕಾನ್ಪುರ: ಬಾಂಗ್ಲಾದೇಶ ವಿರುದ್ಧ ತವರಿನಲ್ಲಿ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದ ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಎರಡೂ ಪಂದ್ಯಗಳಲ್ಲೂ ಗಮನಾರ್ಹ ಪ್ರದರ್ಶನ ನೀಡಿರುವ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಸರಣಿಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದಾರೆ. ಆ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸರಣಿಶ್ರೇಷ್ಠ ಪ್ರಶಸ್ತಿಗಳಿಗೆ ಭಾಜನರಾದ ಆಟಗಾರರ ಪೈಕಿ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಶ್ವಿನ್ 11ನೇ ಸಲ ಸರಣಿಶ್ರೇಷ್ಠ ಪ್ರಶಸ್ತಿಗೆ ಅರ್ಹರಾಗಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು…