ಕುತೂಹಲ ಮೂಡಿಸಿದ ಸಿದ್ದರಾಮಯ್ಯ ಮೈಸೂರು ಪ್ರವಾಸ
ಬೆಂಗಳೂರು, ಸೆಪ್ಟೆಂಬರ್ 26: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶ ನೀಡಿದೆ. ಮೈಸೂರು ಲೋಕಾಯುಕ್ತ ವಿಭಾಗದ ಪೊಲೀಸರು ತನಿಖೆ ನಡೆಸಬೇಕು ಎಂದು ಕೋರ್ಟ್ ಸೂಚಿಸಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂರು ದಿನಗಳ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಈ ನಡೆ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿರುವುನ್ನು ಕರ್ನಾಟಕ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರು. ಹೈಕೋರ್ಟ್ ಅರ್ಜಿಯನ್ನು…