PSI ಪರೀಕ್ಷೆ ಮುಂದೂಡಿಕೆ ವಿಚಾರ; ಕೆಇಎ, ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ: ಗೃಹ ಸಚಿವ ಡಾ. ಜಿ.ಪರಮೇಶ್ವರ್
ಬೆಂಗಳೂರು, ಸೆ.10: ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ. ಸದಾಶಿವನಗರದ ಸಚಿವರ ಗೃಹ ಕಚೇರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಶಾಸಕ ಧೀರಜ್ ಮುನಿರಾಜ್ ನೇತೃತ್ವದ ನಿಯೋಗದಿಂದ ಮನವಿ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ‘402 ಪಿಎಸ್‌ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕೆಇಎ ಅವರಿಗೆ ವಹಿಸಲಾಗಿದೆ. ಸೆ.22ರಂದು ಪರೀಕ್ಷೆ ನಡೆಸಲು ನಿಗಧಿ ಮಾಡಿದ್ದಾರೆ….