ಬೆಂಗಳೂರು: ಅ.17ರಂದು ‘ನಾಯಿ ಉತ್ಸವ’
ಬೆಂಗಳೂರು: ನಾಯಿಗಳೊಂದಿಗಿನ ಪ್ರೀತಿ ಮತ್ತು ಬಾಂಧವ್ಯದ ಕಥೆಗಳನ್ನು ಹಂಚಿಕೊಳ್ಳುತ್ತಾ, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ಪ್ರಾಣಿಗಳ ಪಾಲಕರನ್ನು ಒಟ್ಟುಗೂಡಿಸಲು ಬಿಬಿಎಂಪಿ ‘ನಾಯಿಗಳಿಗಾಗಿ ಉತ್ಸವ’ವನ್ನು (ಕುಕುರ್ ತಿಹಾರ್) ಅ.17ರಂದು ಆಯೋಜಿಸಿದೆ. ‘ಸಮಾಜದಲ್ಲಿ ನಾಯಿಗಳ ಕಡಿತ ಹಾಗೂ ದಾಳಿಯ ಭಯದಿಂದ ಅವುಗಳ ಮೇಲೆ ನಕಾರಾತ್ಮಕ ಭಾವನೆಯೇ ಹೆಚ್ಚಾಗುತ್ತಿದೆ. ಆದರೆ, ನಾಯಿಗಳು ಬಹಳ ನಿಷ್ಠಾವಂತ, ವಿಧೇಯ, ರಕ್ಷಣಾತ್ಮಕ ಹಾಗೂ ಭಾವನಾತ್ಮಕ ಬೆಂಬಲ ನೀಡುವಂತ ಪ್ರಾಣಿಯೂ ಆಗಿದೆ’ ಎಂದು ಆರೋಗ್ಯ, ನೈರ್ಮಲ್ಯ ಮತ್ತು ಪಶುಪಾಲನೆ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ತಿಳಿಸಿದ್ದಾರೆ….