ಕೇವಲ ಪತ್ರದ ಆಧಾರದಲ್ಲಿ CBI ತನಿಖೆಗೆ ಆದೇಶಿಸಲು ಹೈಕೋರ್ಟ್‌ಗೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಯಾವುದೇ ಪ್ರಕರಣದ ಕುರಿತು ಕೆಲವು ಪತ್ರಗಳ ಆಧಾರದಲ್ಲಿ ಅಥವಾ ಸೂಕ್ತ ಕಾರಣಗಳನ್ನು ದಾಖಲಿಸದೆ ಸಿಬಿಐ ತನಿಖೆಗೆ ಆದೇಶಿಸಲು ಹೈಕೋರ್ಟ್ ತನ್ನ ಅಧಿಕಾರವನ್ನು ಚಲಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಯಾವುದೇ ನೇಮಕಾತಿ ಪ್ರಕ್ರಿಯೆಯನ್ನು ಅನುಸರಿಸದೆಯೇ ಗೂರ್ಖಾ ಪ್ರದೇಶದ ಆಡಳಿತದಲ್ಲಿ ಅತಿಥಿ ಶಿಕ್ಷಕರನ್ನು ಕಾಯಂಗೊಳಿಸಲು ಉಸ್ತುವಾರಿ ಸಚಿವರು ಪತ್ರ ಬರೆದಿದ್ದರೆಂದು ಆರೋಪಿಸಲಾಗಿತ್ತು. ಈ ಬಗ್ಗೆ ಸಿಬಿಐನ ಎಸ್‌ಐಟಿ ತನಿಖೆ ಕುರಿತು ಕಲ್ಕತ್ತ ಹೈಕೋರ್ಟ್‌ನ ಏ.9 ಹಾಗೂ 19ರ ಆದೇಶಗಳನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ…