ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ತಮ್ಮ ವಿರುದ್ಧ ಅಭಿಯೋಜನೆಗೆ ಪೂರ್ವಾನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಕಾನೂನು ಸಮರ ಸಾರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೊದಲ ಹಂತದಲ್ಲಿ ಹೈಕೋರ್ಟ್‌ನಲ್ಲಿ ಹಿನ್ನಡೆ ಉಂಟಾಗಿದೆ. ಅರ್ಜಿದಾರರ (ಸಿದ್ದರಾಮಯ್ಯ) ಕುಟುಂಬಕ್ಕೆ ಸೇರಿದವರೇ (ಪತ್ನಿ) ಫಲಾನುಭವಿಯಾಗಿರುವ ಹಿನ್ನೆಲೆಯಲ್ಲಿ ತನಿಖೆ ಅಗತ್ಯವಾಗಿದೆ ಎಂದು ಹೈಕೋರ್ಟ್ ಸುದೀರ್ಘ 197 ಪುಟಗಳ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿರುವ ಕಾರಣ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಪೂರ್ವಾನುಮತಿ…