ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ

ಬೆಂಗಳೂರು: ನಾಡಿನ ಹಿರಿಯ ಪತ್ರಕರ್ತ ವಸಂತ್ ನಾಡಿಗೇರ (60) ಸೋಮವಾರ ಹೃದಯಾಘಾತದಿಂದ ನಿಧನ ಹೊಂದಿದರು.ಕೆಲಕಾಲದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಇತ್ತೀಚಿಗಷ್ಟೇ ಚೇತರಿಸಿಕೊಂಡಿದ್ದರು. ಆದರೆ, ಸೋಮವಾರ ಮುಂಜಾನೆ ಹಠಾತ್ ಹೃದಯಘಾತದಿಂದ ಅಸುನೀಗಿದರು. ಮೃತರು ಪತ್ನಿ, ಪುತ್ರಿ ಮತ್ತು ಪುತ್ರನನ್ನು ಅಗಲಿದ್ದಾರೆ.ಮೃತರ ಅಂತ್ಯಸಂಸ್ಕಾರ ಚಾಮರಾಜಪೇಟೆಯ ಟಿ.ಆರ್. ಮಿಲ್ ಬಳಿಯಿರುವ ಚಿತಾಗಾರದಲ್ಲಿ ನಡೆಯಿತು. ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ವಸಂತ್ ನಾಡಿಗೇರ್ ಧಾರವಾಡದ ಕರ್ನಾಟಕ ವಿವಿಯಲ್ಲಿ ಬಿ.ಎಸ್ಸಿ ಪದವಿ, ಬಳಿಕ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದರು. ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯ ಕರ್ನಾಟಕ…

Read More