ಕಲ್ಯಾಣ ಕರ್ನಾಟಕದ ಭಾಗದ ಅಭಿವೃದ್ಧಿಗೆ 11770 ಕೋಟಿ ರೂ ಯೋಜನೆಗಳಿಗೆ ಅನುಮೋದನೆ: ಸಿಎಂ ಸಿದ್ಧರಾಮಯ್ಯ
ಕಲಬುರಗಿ : ಕಲಬುರಗಿಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಯಾಗಿ ಮಾಡುವ ಹಾಗೂ ಬೀದರ್ ಮತ್ತು ಕಲಬುರಗಿಯಲ್ಲಿ ಬರುವ ಹಳ್ಳಿಗಳಿಗೆ ಕುಡಿಯುವ ನೀರು ಯೋಜನೆಯನ್ನು 7200 ಕೋಟಿ ರೂಗಳ ಯೋಜನೆಗೆ ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ…