Breaking: KPSC ಪರೀಕ್ಷೆ ದಿಢೀರ್ ಮುಂದೂಡಿಕೆ
ಕರ್ನಾಟಕ ಲೋಕಸೇವಾ ಆಯೋಗವು (KPSC) ಪರೀಕ್ಷಾರ್ಥಿಗಳಿಗೆ ಶಾಕ್ ನೀಡಿದೆ. ನಾಳೆ ನಡೆಯಬೇಕಿದ್ದ ಗ್ರೂಪ್ ಬಿ ಪರೀಕ್ಷೆಗಳನ್ನು ಮುಂದೂಡಿ ಕೊನೆಯ ಕ್ಷಣದಲ್ಲಿ ಅಭ್ಯರ್ಥಿಗಳಿಗೆ ನಿರಾಸೆ ಮೂಡಿಸಿದೆ.ರಾಜ್ಯ ಸರ್ಕಾರವು ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ನೀಡಿದೆ. ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿ ಅನ್ವಯವಾಗುವಂತೆ ವಯೋಮಿತಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ನಾಳೆಯಿಂದ ನಡೆಯಬೇಕಿದ್ದ ಕೆಪಿಎಸ್‌ಸಿ ಗ್ರೂಪ್ ಬಿ ಪರೀಕ್ಷೆ ಮುಂದೂಡಿರುವುದಾಗಿ ತಿಳಿಸಿದೆ.ಸರ್ಕಾರದ ಹೊಸ ಆದೇಶದಿಂದ ಎಲ್ಲ ಹುದ್ದೆಗಳಿಗೂ ವಯೋಮಿತಿಯ ಸಡಿಲಿಕೆಯು ಅನ್ವಯವಾಗಲಿದೆ. ಹಾಗಾಗಿ ನಾಳೆ ನಡೆಯಬೇಕಿದ್ದ ಕಡ್ಡಾಯ ಕನ್ನಡ…