ಉಗ್ರರ ದಾಳಿ ಎಚ್ಚರಿಕೆ: ಮುಂಬೈಯಾದ್ಯಂತ ಪೊಲೀಸ್ ಕಟ್ಟೆಚ್ಚರ
ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಉಗ್ರರ ದಾಳಿ ಬೆದರಿಕೆ ಬಗ್ಗೆ ಕೇಂದ್ರೀಯ ಸಂಸ್ಥೆಗಳು ಎಚ್ಚರಿಕೆ ನೀಡಿವೆ. ಈ ಹಿನ್ನೆಲೆಯಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರ ಕಟೆಚ್ಚರಕ್ಕೆ ಸೂಚಿಸಲಾಗಿದೆ.ಮುಂಬೈನ ಧಾರ್ಮಿಕ ಕೇಂದ್ರಗಳು, ಮಾರುಕಟ್ಟೆ, ಶಾಪಿಂಗ್ ಮಾಲ್, ಇತರ ಜನನಿಬಿಡ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಮಾಕ್ ಡ್ರಿಲ್ ನಡೆಸಲು ಪೊಲೀಸ್ ಸಿಬ್ಬಂದಿಗಳಿಗೆ ಸೂಚನೆ ನೀಡಲಾಗಿದೆ. ಮುಂಬೈ ನಗರ ಡಿಸಿಪಿ ತಮ್ಮ ತಮ್ಮ ವಲಯಗಳಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ವಿಶೇಷ ನಿಗಾ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಾವುದೇ ಅನುಮಾನಾಸ್ಪದ ವಸ್ತು, ವ್ಯಕ್ತಿ ಕಂಡುಬಂದಲ್ಲಿ…