ಮುಸ್ಲಿಮ್ ಸಮುದಾಯ ಕುರಿತ ನ್ಯಾಯಾಧೀಶರ ಹೇಳಿಕೆಗೆ ವ್ಯಾಪಕ ಆಕ್ರೋಶ

ಬೆಂಗಳೂರು: ‘ಬೆಂಗಳೂರು ನಗರದ ಮುಸ್ಲಿಮ್ ಸಮುದಾಯ ಹೆಚ್ಚಾಗಿ ವಾಸ ಮಾಡುವ ಸ್ಥಳವನ್ನು ‘ಭಾರತವಲ್ಲ, ಪಾಕಿಸ್ತಾನ’ ಎಂದು ಹೈಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರು ಹೇಳಿರುವುದು ನಮಗೆ ಆಘಾತ ಉಂಟುಮಾಡಿದೆ’ ಎಂದು ಸಾಹಿತಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಗುರುವಾರ ‘ಜಾಗೃತ ನಾಗರಿಕರು ಕರ್ನಾಟಕ’ ಸಂಘಟನೆ ಹೆಸರಿನಲ್ಲಿ ಹಿರಿಯ ಸಾಹಿತಿಗಳಾದ ಪ್ರೊ.ಕೆ.ಮರುಳಸಿದ್ಧಪ್ಪ, ಡಾ.ಜಿ.ರಾಮಕೃಷ್ಣ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ರುದ್ರಪ್ಪ ಹನಗವಾಡಿ, ಬಿ. ಶ್ರೀಪಾದ ಭಟ್, ಡಾ.ಮೀನಾಕ್ಷಿ ಬಾಳಿ, ಕೆ. ಎಸ್. ವಿಮಲ ಸೇರಿ ಮತ್ತಿತರ ಸಾಹಿತಿಗಳು ಪ್ರಗತಿಪರರು ಪ್ರಕಟನೆ ಹೊರಡಿಸಿದ್ದಾರೆ. ಸರ್ವಧರ್ಮ ಸಮಭಾವದ ಸಂವಿಧಾನವನ್ನು…

Read More