ಕೆಎಸ್ಸಾರ್ಟಿಸಿ ನಿಲ್ದಾಣಗಳಲ್ಲಿ ಶೀಘ್ರವೇ ನಮ್ಮ ಕ್ಲಿನಿಕ್!
ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಸಾರ್ಟಿಸಿ)ದ ಆಯ್ದ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಹಾಗೂ ಬಸ್ ಚಾಲಕ, ನಿರ್ವಾಹಕರ ಆರೋಗ್ಯದ ದೃಷ್ಟಿಯಿಂದ “ನಮ್ಮ ಕ್ಲಿನಿಕ್’ಗಳನ್ನು ಶೀಘ್ರವೇ ತೆರೆಯಲು ರಾಜ್ಯ ಸರಕಾರವು ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ ಹಿಂದಿನ ಸರಕಾರ ನಗರ ಭಾಗದಲ್ಲಿ “ನಮ್ಮ ಕ್ಲಿನಿಕ್’ಗಳನ್ನು ತೆರೆದಿದ್ದು, ಅವು ಯಶಸ್ವಿ ಯಾಗಿ ಕಾರ್ಯನಿರ್ವಹಿಸುತ್ತಿವೆ. ತಾಲೂಕು, ಜಿಲ್ಲಾಸ್ಪತ್ರೆಗಳ ಮೇಲಿನ ಒತ್ತಡವನ್ನು ಅವು ಕಡಿಮೆ ಮಾಡಿವೆ. ಹೀಗಾಗಿ ರಾಜ್ಯಾದ್ಯಂತ ಇನ್ನಷ್ಟು ಕ್ಲಿನಿಕ್ಗಳನ್ನು ಆರಂಭಿಸಲು ನಿರ್ಧರಿಸಿ, ಪ್ರತೀ ಜಿಲ್ಲೆಗೆ ಹೆಚ್ಚುವರಿಯಾಗಿ ಮಂಜೂರು ಮಾಡಲಾಗಿದೆ. ಕೆಎಸ್ಸಾರ್ಟಿಸಿ ಬಸ್…