ತಿರುಪತಿ ಲಡ್ಡು ವಿವಾದ: ಪವನ್ ಕಲ್ಯಾಣ್ಗೆ ಪ್ರಕಾಶ್ ರಾಜ್ ಟಾಂಗ್
ಅಮರಾವತಿ: ಕೋಟ್ಯಂತರ ಹಿಂದುಗಳ ಪವಿತ್ರ ಕ್ಷೇತ್ರ ತಿರುಪತಿಯ ತಿರುಮಲ ದೇಗುಲದ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಹಾಗೂ ಪ್ರಾಣಿಗಳ ಕೊಬ್ಬು ಬಳಕೆ ಆಗುತ್ತಿತ್ತೆಂಬ ವಿಚಾರ ಬೆಳಕಿಗೆ ಬಂದಿದ್ದು, ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ಅವಧಿಯಲ್ಲಿ ನಡೆದಿತ್ತೆನ್ನಲಾದ ಈ ಪ್ರಮಾದವನ್ನು ಸತ್ಯ ಎಂದು ಗುಜರಾತ್ನ ಪ್ರಯೋಗಾಲಯ ದೃಢಪಡಿಸಿದ ಬೆನ್ನಲ್ಲೇ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಎಲ್ಲೆಡೆ ಚರ್ಚೆ ಜೋರಾಗಿ ನಡೆಯುತ್ತಿದೆ. ತಿರುಮಲ ಲಡ್ಡು ವಿವಾದದ ಬಗ್ಗೆ ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಆಂಧ್ರದ ಉಪ…