ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿ ಕೊಬ್ಬು ಬಳಕೆ ಆರೋಪ: ತುಪ್ಪದ ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ
ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ತನಿಖಾ ವರದಿಯಲ್ಲೂ ಇದು ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷೆ ಮಾಡಲು ಸಮಿತಿಯೊಂದನ್ನು ಟಿಟಿಡಿ ಸ್ಥಾಪಿಸಿದೆ. ನಾಲ್ಕು ತಜ್ಞರನ್ನು ಈ ಸಮಿತಿ ಒಳಗೊಂಡಿದೆ. ಡಾ. ಸ್ವರ್ಣಲತಾ, ಡಾ. ವಿಜಯ್ ಭಾಸ್ಕರ್ ರೆಡ್ಡಿ, ಡಾ.ಮಹದೇವನ್ ಹಾಗೂ ಡಾ. ಸುರೇಂದ್ರನಾಥ್ ಅವರನ್ನೊಳಗೊಂಡಂತೆ ಸಮಿತಿಯನ್ನು ರಚಿಸಲಾಗಿದ್ದು ಇವರು ತುಪ್ಪದ ಗುಣಮಟ್ಟವನ್ನು ಪರಿಶೀಲನೆ ನಡೆಸಲಿದ್ದಾರೆ. ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆ…