Breaking: ನಟ ದರ್ಶನ್ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ 17 ಆರೋಪಿಗಳಿಗೆ ಸೆಪ್ಟೆಂಬರ್ 12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಇಂದು (ಸೋಮವಾರ) ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಬೆನ್ನಲ್ಲೇ ಇಂದು ಎಲ್ಲಾ 17 ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.